ಬಿಬಿಎಂಪಿ ಅಧಿಕಾರಿ ಗಂಗಾಧರಯ್ಯ ನಿವಾಸದ ಮೇಲೆ ಲೋಕಾಯುಕ್ತ ದಾಳಿ: 1.40 ಕೋಟಿ ನಗದು ಮತ್ತು ಚಿನ್ನಾಭರಣ ಪತ್ತೆ

ಹೊಸದಿಗಂತ ಡಿಜಿಟಲ್ ಡೆಸ್ಕ್:‌

ರಾಜ್ಯದಲ್ಲಿಂದು ವಿವಿಧೆಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಬಿಬಿಎಂಪಿ ಯಲಹಂಕ ವಲಯದ ನಗರ ಯೋಜನಾ ವಿಭಾಗದ ಸಹಾಯಕ ನಿರ್ದೇಶಕ ಗಂಗಾಧರಯ್ಯ ನಿವಾಸದಲ್ಲಿ ಕೋಟಿ ಕೋಟಿ ಹಣ ಮತ್ತು ಚಿನ್ನಾಭರಣ ಪತ್ತೆಯಾಗಿದೆ.

ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ಗಂಗಾಧರಯ್ಯ ವಿರುದ್ಧ ಪ್ರಕರಣ ದಾಖಲಿಸಿರುವ ಲೋಕಾಯುಕ್ತ ಪೊಲೀಸರು, ಬೆಂಗಳೂರಿನ ಏಳು ಸ್ಥಳಗಳಲ್ಲಿ ಇಂದು ಬೆಳಿಗ್ಗೆ ದಾಳಿ ಮಾಡಿದ್ದಾರೆ.

ಮೂರು ಸ್ಥಳಗಳಲ್ಲಿ 1.40 ಕೋಟಿ ನಗದು, ಯಲಹಂಕ, ಜೆ.ಸಿ.ನಗರ ಮತ್ತು ಹೆಬ್ಬಾಳದಲ್ಲಿ 12 ಫ್ಲ್ಯಾಟ್‌, ನೆಲಮಂಗಲದಲ್ಲಿ 1.5 ಕೋಟಿ ಮೌಲ್ಯದ 5 ಎಕರೆ ಜಮೀನು, ಮಲ್ಲೇಶ್ವರದಲ್ಲಿ 3.5 ಕೋಟಿ ಮೌಲ್ಯದ ನಿವೇಶನ ಹೊಂದಿರುವುದು ಪತ್ತೆಯಾಗಿದೆ. ಅದಲ್ಲದೆ ಒಂದು ಕೋಟಿ ಮೌಲ್ಯದ ಚಿನ್ನ ವಶಕ್ಕೆ ಪಡೆಯಲಾಗಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇಂದು ಬೆಂಗಳೂರು, ದಾವಣಗೆರೆ, ಕೋಲಾರ, ಬೀದರ್, ಚಿತ್ರದುರ್ಗ ಸೇರಿದಂತೆ ಅನೇಕ ಕಡೆಗಳಲ್ಲಿ ಲೋಕಾಯುಕ್ತ ಮತ್ತು ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!