ಕರ್ನಾಟಕದಾದ್ಯಂತ ಲೋಕಾಯುಕ್ತ ದಾಳಿ: ಸರ್ಕಾರಿ ಕಚೇರಿಯಲ್ಲಿ ದಾಖಲೆ ಪರಿಶೀಲನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದು ಬೆಳ್ಳಂಬೆಳಗ್ಗೆ ರಾಜ್ಯಾದ್ಯಂತ ಲೋಕಾಯುಕ್ತ ದಾಳಿ ನಡೆದಿದ್ದು, ಸರ್ಕಾರಿ ಅಧಿಕಾರಿಗಳ ಕಚೇರಿ ಹಾಗೂ ನಿವಾಸದಲ್ಲಿ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ.

ಬೆಂಗಳೂರು, ತುಮಕೂರು, ಹಾಗೂ ಹಾವೇರಿ ಜಿಲ್ಲೆಯಲ್ಲಿ ರೈಡ್ ನಡೆದಿದೆ. ಸರ್ಕಾರಿ ಅಧಿಕಾರಿಗಳು ಆದಾ ಮೀರಿ ಅಧಿಕ ಆಸ್ತಿ ಗಳಿಸಿದ ಆರೋಪ ಎದುರಾಗಿದ್ದು, ಈ ಹಿನ್ನೆಲೆಯಲ್ಲಿ ದಾಳಿ ನಡೆದಿದೆ.

ಆದಾಯದ ಮೂಲ, ಆಸ್ತಿ ಪತ್ರ ಹಾಗೂ ಬ್ಯಾಂಕ್ ವಿವರಗಳ ಬಗ್ಗೆ ಲೋಕಾಯುಕ್ತ ಮಾಹಿತಿ ಪಡೆದು, ಪರಿಶೀಲನೆ ನಡೆಸುತ್ತಿದ್ದಾರೆ. ತುಮಕೂರಿನ ಕೆಐಎಡಿಬಿ ಅಧಿಕಾರಿ ನರಸಿಂಹಮೂರ್ತಿ, ಬೆಂಗಳೂರಿನಲ್ಲಿ ಬೆಸ್ಕಾಂ ಟೆಕ್ನಿಕಲ್ ಡೈರೆಕ್ಟರ್ ರಮೇಶ್ ಮನೆ ಮೇಲೆ ದಾಳಿ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!