Wednesday, October 22, 2025

LOKA RAID | ಚಿತ್ರದುರ್ಗದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಚಿತ್ರದುರ್ಗ ಜಿಲ್ಲೆಯಲ್ಲಿ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಬೆಳ್ಳಂಬೆಳಗ್ಗೆ ಶಾಕ್‌ ಕೊಟ್ಟಿದೆ. ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ಆರೋಪದ ಮೇಲೆ ಇಲ್ಲಿನ ಕೃಷಿ ಇಲಾಖೆ ಎಡಿ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ.

ಚಿತ್ರದುರ್ಗ ಲೋಕಾಯುಕ್ತ ಎಸ್ಪಿ ವಾಸುದೇವರಾಮ್, ಡಿವೈಎಸ್ಪಿ ಮೃತ್ಯುಂಜಯ, ಪಿಐ ಮಂಜುನಾಥ್ ನೇತೃತ್ವದಲ್ಲಿ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿದೆ.

ಚಂದ್ರಕಾಂತ್‌ ಅವರಿಗೆ ಸೇರಿದ 2 ಮನೆ ಮತ್ತು ಚಿತ್ರದುರ್ಗದ ಕೃಷಿ ಇಲಾಖೆ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳ ತಂಡ ಬೆಳ್ಳಂಬೆಳಗ್ಗೆ ದಾಳಿ ನಡೆಸಿದೆ.

ತರಳಬಾಳು ನಗರ, ಹೊಳಲ್ಕೆರೆ ತಾಲೂಕಿನ ಟಿ ನುಲೇನೂರು ಗ್ರಾಮದ ಮನೆಗಳ ಮೇಲೆ ದಾಳಿ ನಡೆಸಿದ್ದು, ದಾಖಲೆಗಳ ಶೋಧ ನಡೆಸಿದ್ದಾರೆ.

error: Content is protected !!