ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಲ್ಲಿ ಬಿಬಿಎಂಪಿ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಐಟಿ ದಾಳಿ ಬಳಿಕ ಲೋಕಾಯುಕ್ತ ಅಧಿಕಾರಿಗಳು ಕೂಡ ಇದೀಗ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಬಿಬಿಎಂಪಿ ಉಪ ಹಣಕಾಸು ನಿಯಂತ್ರಣಾಧಿಕಾರಿ ಸತ್ಯಮೂರ್ತಿ ಹಾಗೂ ಬಿಬಿಎಂಪಿ ಕಲ್ಯಾಣಾಧಿಕಾರಿ ಲಲಿತಾ ಅವರ ನಿವಾಸದಲ್ಲೂ ಲೋಕಾಯುಕ್ತ ಅಧಿಕಾರಿಗಳು ಶೋಧ ನಡೆಸಿದ್ದಾರೆ.
ಡಿವೈಎಸ್ಪಿ ಸುನೀಲ್ ನೇತೃತ್ವದಲ್ಲಿ ಎಂಟು ಪೊಲೀಸ್ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಮಹತ್ವದ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದೆ ಎನ್ನಲಾಗಿದೆ.