November 17, 2026
Tuesday, November 17, 2026
spot_img

ಬೆಳಗಾವಿಯಲ್ಲಿ ಲೋಕಾಯುಕ್ತರ ದಾಳಿ: ಲಂಚ ಸ್ವೀಕರಿಸುವಾಗ ಎಸಿ ಕಚೇರಿ ಸಿಬ್ಬಂದಿ ಅರೆಸ್ಟ್

ಹೊಸದಿಗಂತ ವರದಿ ಬೆಳಗಾವಿ:

ಲಂಚ ಸ್ವೀಕರಿಸುತ್ತಿದ್ದ ಉಪವಿಭಾಗಾಧಿಕಾರಿ (ಎಸಿ) ಕಚೇರಿಯ ಸಿಬ್ಬಂದಿಯೊಬ್ಬರು ಮಂಗಳವಾರ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.

ಎಸಿ ಕೋರ್ಟ್‌ಗೆ 37 ಪ್ರಕರಣಗಳನ್ನು ವರ್ಗಾವಣೆಗೊಳಿಸಲು 30 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಎಸ್‌ಡಿಎ ಸಿಬ್ಬಂದಿ ಪದ್ಮಾಕರ್ ಪಾಟೀಲ್, 2 ಸಾವಿರ ರೂ. ಹಣ ಸ್ವೀಕರಿಸುವ ಸಂದರ್ಭದಲ್ಲಿ ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ.

ಇದನ್ನೂ ಓದಿ:

ಈ ಕುರಿತು ಶುಭಂ ಅಪ್ಪಾರಾವ್ ಎಂಬುವವರು ಲೋಕಾಯುಕ್ತರಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಬೆಳಗಾವಿಯ ಉಪವಿಭಾಗಾಧಿಕಾರಿ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಲಂಚ ಸ್ವೀಕರಿಸುತ್ತಿದ್ದ ವೇಳೆ ಪದ್ಮಾಕರ್ ಪಾಟೀಲ್ ಅವರನ್ನು ವಶಕ್ಕೆ ಪಡೆದಿದ್ದಾರೆ.

ಲೋಕಾಯುಕ್ತ ಎಸ್ಪಿ ಪ್ರಸನ್ನ ದೇಸಾಯಿ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ಮುಂದಿನ ತನಿಖೆ ಕೈಗೊಂಡಿದ್ದಾರೆ.

Must Read

Skip to toolbar