ಹೊಸದಿಗಂತ ವರದಿ ಹಾವೇರಿ :
ಜಿಲ್ಲೆಯ ಶಿಗ್ಗಾಂವ ತಾಲೂಕಿನ ಬಾಡ ಗ್ರಾಮ ಪಂಚಾಯತ್ ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಬೆಳ್ಳಂಬೆಳಿಗ್ಗೆ ಪಿಡಿಓ ಕಚೇರಿ ಮತ್ತು ಅವರ ಹುಬ್ಬಳ್ಳಿಯ ಮನೆಯ ಮೇಲೆ ದಾಳಿ ನಡೆಸಿದ ಲೋಕಾಯುಕ್ತರು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಬಾಡ ಗ್ರಾಮ ಪಂಚಾಯಿತಿ ಪಿಡಿಒ ರಾಮಕೃಷ್ಣಪ್ಪ ಗುಡಗೇರಿ ಕಚೇರಿ ಮೇಲೆ ಮತ್ತು ಧಾರವಾಡದ ಮನೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾವಣಗೆರೆ ಮತ್ತು ಹಾವೇರಿ ಲೋಕಾಯುಕ್ತರ ಸಿಬ್ಬಂದಿ ಜಂಟಿ ಕಾರ್ಯಚರಣೆ ನಡೆಸಿದ್ದಾರೆ.
ಪಿಡಿಓ ರಾಮಕೃಷ್ಣಪ್ಪ ಗುಡಗೇರಿ ಮೇಲೆ ಹಲಾವಾರು ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ. ಸದ್ಯ ದಾಖಲಾತಿಗಳ ಪರಿಶೀಲನೆ ಕಾರ್ಯ ನಡೆದಿದ್ದು ಅಕ್ರಮಗಳ ಬಗ್ಗೆ ಲೋಕಾಯುಕ್ತ ಪೊಲೀಸರು ಇನ್ನಷ್ಟೆ ಮಾಹಿತಿ ನೀಡಬೇಕಿದೆ..