ಏಕಕಾಲಕ್ಕೆ ಹಲವು ಸರ್ಕಾರಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ದಾಖಲಾತಿ ವಶಕ್ಕೆ

ಹೊಸದಿಗಂತ ವರದಿ ದಾವಣಗೆರೆ:

ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ತಂಡ ಶುಕ್ರವಾರ ಏಕಕಾಲಕ್ಕೆ ಹಲವು ಸರ್ಕಾರಿ ಕಚೇರಿಗಳ ಮೇಲೆ ದಾಳಿ ಮಾಡಿ ಅಧಿಕಾರಿಗಳು ಹಾಗೂ ನೌಕರರ ಬೆವರಿಳಿಸಿದೆ.

ಇಲ್ಲಿನ ಮಹಾನಗರ ಪಾಲಿಕೆ, ವಲಯ ಕಚೇರಿ-3, ಉಪನೋಂದಣಾಧಿಕಾರಿ ಹಾಗೂ ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿಗಳ ಮೇಲೆ ಲೋಕಾಯುಕ್ತ ತಂಡ ದಾಳಿ ನಡೆಸಿ, ಪಾಲಿಕೆ ವ್ಯಾಪ್ತಿಯಲ್ಲಿನ ಸಿ.ಎ.ಸೈಟ್ ಅವ್ಯವಹಾರಕ್ಕೆ ಸಂಬಂಧಿಸಿದ ದಾಖಲಾತಿ ಪತ್ರಗಳನ್ನು ವಶಪಡಿಸಿಕೊಂಡಿದೆ.

ಸದ್ಯ ದಾಖಲೆಗಳ ಪರಿಶೀಲನೆ ಕೈಗೊಂಡಿರುವ ಲೋಕಾಯುಕ್ತ ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ.
ದಾವಣಗೆರೆ ಲೋಕಾಯುಕ್ತ ಘಟಕದ ಪೊಲೀಸ್ ಅಧೀಕ್ಷಕ ಎಂ.ಎಸ್.ಕೌಲಾಪೂರೆ ಮಾರ್ಗದರ್ಶನದಲ್ಲಿ, ಪೊಲೀಸ್ ನಿರೀಕ್ಷಕರ ನೇತೃತ್ವದಲ್ಲಿ ನಾಲ್ಕು ತಂಡಗಳು ಏಕಕಾಲಕ್ಕೆ ದಾಳಿ ನಡೆಸಿವೆ.

ದಾವಣಗೆರೆ ಮಹಾನಗರ ವ್ಯಾಪ್ತಿಯಲ್ಲಿರುವ ಸಿ.ಎ.ಸೈಟ್‌ಗಳನ್ನು ಅಕ್ರಮವಾಗಿ ಖಾತೆ ಮಾಡುತ್ತಿರುವ ಬಗ್ಗೆ ಬಂದಿದ್ದ ದೂರು ಅರ್ಜಿ ಆಧಾರದ ಮೇರೆಗೆ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!