November 18, 2026
Wednesday, November 18, 2026
spot_img

ಜಮಖಂಡಿ ತಾ.ಪಂ. ಸಹಾಯಕ ನಿರ್ದೇಶಕ ಸಂಜೀವ್ ಹಿಪ್ಪರಗಿ ಮನೆ ಮೇಲೆ ಲೋಕಾಯುಕ್ತ ದಾಳಿ

ಹೊಸದಿಗಂತ ವರದಿ ಬಾಗಲಕೋಟೆ:

ಆದಾಯದ ಮೂಲಗಳಿಗೆ ಹೋಲಿಸಿದರೆ ಹೆಚ್ಚಿನ ಪ್ರಮಾಣದ ಆಸ್ತಿ ಗಳಿಸಿರುವ ಆರೋಪದ ಹಿನ್ನೆಲೆಯಲ್ಲಿ ಜಮಖಂಡಿ ತಾಲ್ಲೂಕು ಪಂಚಾಯತಿಯ ಸಹಾಯಕ ನಿರ್ದೇಶಕ ಸಂಜೀವ್ ಹಿಪ್ಪರಗಿ ಅವರ ವಿರುದ್ಧ ಬಾಗಲಕೋಟೆ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬುಧವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಶೋಧನೆ ಕೈಗೊಂಡಿದ್ದಾರೆ.

ಜಮಖಂಡಿಯಲ್ಲಿ ಸಂಜೀವ್ ಹಿಪ್ಪರಗಿ ಅವರು ವಾಸಿಸುವ ಮನೆ ಹಾಗೂ ಅವರ ತಂದೆ ವಾಸಿಸುವ ಮನೆಯಲ್ಲಿ ಏಕಕಾಲದಲ್ಲಿ ಶೋಧನಾ ಕಾರ್ಯಾಚರಣೆ ನಡೆಸಲಾಗಿದೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಕುರಿತು ಲಭ್ಯವಾದ ಮಾಹಿತಿಯ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡು ಈ ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.

ಇದನ್ನೂ ಓದಿ:

ಶೋಧನಾ ಕಾರ್ಯಾಚರಣೆಯಲ್ಲಿ ಆಸ್ತಿ, ದಾಖಲೆಗಳು ಹಾಗೂ ಇತರೆ ಸಂಬಂಧಿತ ಮಾಹಿತಿಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಶೋಧನಾ ಕಾರ್ಯ ಇನ್ನೂ ಮುಂದುವರಿದಿದ್ದು, ಕಾರ್ಯಾಚರಣೆ ಪೂರ್ಣಗೊಂಡ ಬಳಿಕ ಹೆಚ್ಚಿನ ವಿವರಗಳು ಲಭ್ಯವಾಗುವ ನಿರೀಕ್ಷೆಯಿದೆ.

ಬಾಗಲಕೋಟೆ, ಬೆಳಗಾವಿ ಹಾಗೂ ಕೊಪ್ಪಳ ಜಿಲ್ಲೆಗಳ ಲೋಕಾಯುಕ್ತ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ.

Must Read

Skip to toolbar