ಜಮಖಂಡಿ ತಾ.ಪಂ. ಸಹಾಯಕ ನಿರ್ದೇಶಕ ಸಂಜೀವ್ ಹಿಪ್ಪರಗಿ ಮನೆ ಮೇಲೆ ಲೋಕಾಯುಕ್ತ ದಾಳಿ

ಹೊಸದಿಗಂತ ವರದಿ ಬಾಗಲಕೋಟೆ: ಆದಾಯದ ಮೂಲಗಳಿಗೆ ಹೋಲಿಸಿದರೆ ಹೆಚ್ಚಿನ ಪ್ರಮಾಣದ ಆಸ್ತಿ ಗಳಿಸಿರುವ ಆರೋಪದ ಹಿನ್ನೆಲೆಯಲ್ಲಿ ಜಮಖಂಡಿ ತಾಲ್ಲೂಕು ಪಂಚಾಯತಿಯ ಸಹಾಯಕ ನಿರ್ದೇಶಕ ಸಂಜೀವ್ ಹಿಪ್ಪರಗಿ ಅವರ ವಿರುದ್ಧ ಬಾಗಲಕೋಟೆ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬುಧವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಶೋಧನೆ ಕೈಗೊಂಡಿದ್ದಾರೆ. ಜಮಖಂಡಿಯಲ್ಲಿ ಸಂಜೀವ್ ಹಿಪ್ಪರಗಿ ಅವರು ವಾಸಿಸುವ ಮನೆ ಹಾಗೂ ಅವರ ತಂದೆ ವಾಸಿಸುವ ಮನೆಯಲ್ಲಿ ಏಕಕಾಲದಲ್ಲಿ ಶೋಧನಾ ಕಾರ್ಯಾಚರಣೆ ನಡೆಸಲಾಗಿದೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಕುರಿತು ಲಭ್ಯವಾದ … Continue reading ಜಮಖಂಡಿ ತಾ.ಪಂ. ಸಹಾಯಕ ನಿರ್ದೇಶಕ ಸಂಜೀವ್ ಹಿಪ್ಪರಗಿ ಮನೆ ಮೇಲೆ ಲೋಕಾಯುಕ್ತ ದಾಳಿ