ಹೊಸದಿಗಂತ ವರದಿ ಬೆಳಗಾವಿ:
ನಗರದಲ್ಲಿನ ಮೂವರು ಅಧಿಕಾರಿಗಳಿಗೆ ಶಾಕ್ ನೀಡಿರುವ ಲೋಕಾಯುಕ್ತ ಪೊಲೀಸರು ಯ, ಶನಿವಾರ ಬೆಳಂಬೆಳಗ್ಗೆ ಮೂರು ಕಡೆ ದಾಳಿ ನಡೆಸಿದ್ದಾರೆ.
ಇಲ್ಲಿನ ದೇವರಾಜ್ ಅರಸು ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಸಿದ್ಧಲಿಂಗಪ್ಪ ಬಾನಸಿ ಅವರಿಗೆ ಸೇರಿದ ಇಲ್ಲಿನ ವಿದ್ಯಾನಗರದಲ್ಲಿರುವ ಮನೆ ಮೇಲೆ ದಾಳಿ ನಡೆದಿದೆ. ಅಲ್ಲದೇ, ರಾಯಬಾಗ ತಾಲೂಕಿನ ಬೆಕ್ಕೇರಿ ಗ್ರಾಮದಲ್ಲಿರುವ ಮನೆ ಹಾಗೂ ಕಚೇರಿ ಮೇಲೆಯೂ ದಾಳಿ ಮಾಡಲಾಗಿದೆ.
ಧಾರವಾಡದ ಲೋಕೋಪಯೋಗಿ ಇಲಾಖೆ ಮುಖ್ಯ ಇಂಜಿನಿಯರ್ ಎಚ್‌ಸಿ ಸುರೇಶಗೆ ಸೇರಿದ ಇಲ್ಲಿನ ಮನೆ ಮೇಲೂ ದಾಳಿ ನಡೆದಿದೆ. ಹನುಮಾನ ನಗರದಲ್ಲಿರುವ ಸುರೇಶ ಅವರ ಮನೆ ಮೇಲೆ ದಾಳಿ ನಡೆದಿದೆ.
ಇನ್ನು, ಗದುಗಿನ ನಿರ್ಮಿತಿ ಕೇಂದ್ರದ ಪ್ರೊಜೆಕ್ಟ್ ಡೈರೆಕ್ಟರ್ ಗಂಗಾಧರ ಶಿರೋಳ ಮನೆ ಮೇಲೂ ದಾಳಿ ಮಾಡಲಾಗಿದೆ.
ಜಿಲ್ಲಾ ಲೋಕಾಯುಕ್ತ ಎಸ್ಪಿ ಹನಮಂತರಾಯ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.