ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಕಚೇರಿಗೆ ಹಾಜರಾಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಚಾರಣೆ ಪೂರ್ಣಗೊಂಡಿದೆ.
ಇಂದು ಬೆಳಗ್ಗೆ 10 ಗಂಟೆಗೆ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾದ ಸಿದ್ದರಾಮಯ್ಯ ಅವರನ್ನು ಮಧ್ಯಾಹ್ನ12 ಗಂಟೆವರೆಗೆ ವಿಚಾರಣೆ ನಡೆಸಲಾಯಿತು. ಲೋಕಾಯುಕ್ತ ಎಸ್ಪಿ ಉದೇಶ್ ನೇತೃತ್ವದಲ್ಲಿ ಸಿದ್ದರಾಮಯ್ಯ ಅವರನ್ನು ಎರಡು ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿದ್ದು, ಅಧಿಕಾರಿಗಳ ಹಲವು ಪ್ರಶ್ನೆಗಳಿಗೆ ಸಿಎಂ ಉತ್ತರಿಸಿದ್ದಾರೆ.
ವಿಚಾರಣೆ ಬಳಿಕ ಸಿದ್ದರಾಮಯ್ಯ ಅವರು ಮೈಸೂರು ಲೋಕಾಯುಕ್ತ ಕಚೇರಿಯಿಂದ ನಿರ್ಗಮಿಸಿದರು. ಬಳಿಕ ಮೈಸೂರಿನ ಅತಿಥಿ ಗೃಹಕ್ಕೆ ತೆರಳಿದ್ದಾರೆ ಎನ್ನಲಾಗಿದೆ.