ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಳ್ಳಂ ಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ನೀಡಿದ್ದು, ರಾಜ್ಯದ ಹಲವು ಕಡೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು, ಕೋಲಾರ, ಕಲಬುರಗಿ, ದಾವಣಗೆರೆ, ವಿಜಯಪುರ, ಬಾಗಲಕೋಟೆ ಸೇರಿ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪ ಕೇಳಿ ಬಂದ ಹಿನ್ನೆಲೆ ಹಲವು ಕಡೆ ದಾಳಿ ನಡೆಸಲಾಗಿದೆ.