ಲಾಂಗ್ ಹಿಡಿದು ರೀಲ್ಸ್: ಬಿಗ್ ಬಾಸ್ ಖ್ಯಾತಿಯ ರಜತ್, ವಿನಯ್ ಗೌಡ ಪೊಲೀಸ್ ವಶಕ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರೀಲ್ಸ್ ಗೋಸ್ಕರ 18 ಸೆಕೆಂಡ್ ಗಳ ಕಾಲ ಲಾಂಗ್ ಪ್ರದರ್ಶಿಸಿ ಸಾರ್ವಜನಿಕವಾಗಿ ಭಯ ಹುಟ್ಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಬಸವೇಶ್ವರ ಠಾಣೆ ಪೊಲೀಸರು ಬಿಗ್ ಬಾಸ್ ಖ್ಯಾತಿಯ ರಜತ್ ಮತ್ತು ವಿನಯ್ ಗೌಡನನ್ನು ವಿಚಾರಣೆಗೆ ಬುಲಾವ್ ನೀಡಿದ್ದರು. ಈ ವೇಳೆ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ರಜತ್ ಕಿಶನ್ ಜೊತೆ ನಟ ವಿನಯ್ ಗೌಡ ರೀಲ್ಸ್ ಮಾಡಿದ್ದಾರೆ. ಈ ರೀಲ್ಸ್‌ನಲ್ಲಿ ವಿನಯ್ ಗೌಡ ಲಾಂಗ್ ಹಿಡಿದು, ಕಣ್ಣಿಗೆ ಕೂಲಿಂಗ್ ಗ್ಲಾಸ್ ಹಾಕಿಕೊಂಡು ದರ್ಶನ್ ಅವರ ‘‌ಕರಿಯ’ ಸಿನಿಮಾದ ಸ್ಟೈಲ್‌ನಲ್ಲಿ ಸ್ಲೋ ಮೋಷನ್‌ನಲ್ಲಿ ನಡೆಯುತ್ತಿರುತ್ತಾರೆ. ಈ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗ್ತಿತ್ತು..ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಬಸವೇಶ್ವರ ಠಾಣೆ ಪಿಎಸ್ಐ ದೂರು ನೀಡಿದ್ದು, ಬಸವೇಶ್ವರ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ಧ ಇದೀಗ ಎಫ್ಐಆರ್ ದಾಖಲಾಗಿದೆ. ಇದೀಗ ವಿಚಾರಣೆಗೆ ಕರೆದ ಸಂದರ್ಭದಲ್ಲಿ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!