ಹೊಸದಿಗಂತ ಆನ್ಲೈನ್ ಡೆಸ್ಕ್:
ಬಹುನಿರೀಕ್ಷಿತ ರಾಜ್ಯ ಬಜೆಟ್ ಇಂದು ಮಂಡನೆಯಾಗಲಿದೆ.
ಇದೇ ಮೊದಲ ಬಾರಿಗೆ ವಿತ್ತೀಯ ಕೊರತೆ ಬಜೆಟ್ ಮಂಡನೆಯಾಗಲಿದ್ದು, ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬಜೆಟ್ ಮಂಡನೆ ಮಾಡಲಿದ್ದಾರೆ.
ಸರಿಯಾಗಿ 12 ಗಂಟೆ 5 ನಿಮಿಷಕ್ಕೆ ಬಜೆಟ್ ಆರಂಭವಾಗಲಿದೆ. ಸಿಎಂ ಯಡಿಯೂರಪ್ಪ ಅವರ 8 ನೇ ಬಜೆಟ್ ಇದಾಗಿದೆ.
ಯಾವುದೇ ಹೊಸ ತೆರಿಗೆ ವಿಧಿಸದೆ, ಪೆಟ್ರೋಲ್, ಡೀಸೆಲ್ ಮಾರಾಟದ ಮೇಲಿನ ತೆರಿಗೆಯನ್ನೂ ಇಳಿಸದೆ, ಹೆಚ್ಚು ಹೊಸ ಯೋಜನೆಗಳನ್ನು ಘೋಷಣೆ ಮಾಡದೆ ದಶಕಗಳ ನಂತರ ಇದೇ ಮೊದಲ ಬಾರಿಗೆ ವಿತ್ತೀಯ ಕೊರತೆ ಬಜೆಟ್ ಮಂಡನೆಯಾಗಲಿದೆ.