Thursday, February 29, 2024

GOOD MORNING KARNATAKA | ಹೀಗಿದೆ ನೋಡಿ ಇಂದಿನ ಹವಾಮಾನ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಂದಿನ 24 ತಾಸುಗಳ ಅವಧಿಯಲ್ಲಿ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡಿನ ಒಂದೆರಡು ಕಡೆ ಮಳೆಯ ಜೊತೆ ಗುಡುಗು ಮಿಂಚು ಕಾಣಿಸಿಕೊಳ್ಳಲಿದೆ, ಉತ್ತರ ಒಳನಾಡಿನ ಒಂದೆರಡು ಕಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಎಚ್ಚರಿಕೆ ಹೇಳಿದೆ.

ಇನ್ನು ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯ ಮೋಡ ಕವಿದ ವಾತಾವರಣ ಕಾಣಿಸಿಕೊಳ್ಳಲಿದ್ದು, ಕೆಲವು ಕಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಬೆಳಗಿನ ಜಾವ ಕೆಲವೆಡೆ ದಟ್ಟ ಮಂಜು ಕಾಣಿಸಿಕೊಳ್ಳಲಿದ್ದು, ಉಷ್ಣಾಂಶ ಗರಿಷ್ಠ 27, ಕನಿಷ್ಠ 19 ಡಿಗ್ರಿ ಸೆಲ್ಸಿಯೆಸ್ ಇರಲಿದೆ ಎಂದು ಇಲಾಖೆ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!