Tuesday, May 30, 2023

Latest Posts

ಪ್ರತಿ ಯುಗದಲ್ಲೂ ಭಗವಾನ್ ರಾಮನ ಜೀವನ ಮಾನವೀಯತೆಗೆ ಸ್ಫೂರ್ತಿ : ರಾಮನವಮಿಗೆ ಪ್ರಧಾನಿ ಮೋದಿ ಶುಭಾಶಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಭಗವಾನ್ ರಾಮನ ಜೀವನವು ಪ್ರತಿ ಯುಗದಲ್ಲೂ ಮಾನವೀಯತೆಗೆ ಸ್ಫೂರ್ತಿಯಾಗಿ ಉಳಿಯುತ್ತದೆ ಎಂದು ಹೇಳುವ ಮೂಲಕ ನಾಡಿನ ಜನತೆಗೆ ಪ್ರಧಾನಿ ನರೇಂದ್ರ ಮೋದಿ ರಾಮನವಮಿ ಪ್ರಯುಕ್ತ ಶುಭ ಕೋರಿದ್ದಾರೆ.

ಟ್ವಿಟರ್‌ನಲ್ಲಿ ಪ್ರಧಾನಿ ಮೋದಿ, “ರಾಮ ನವಮಿಯ ಶುಭ ಸಂದರ್ಭದಲ್ಲಿ ಎಲ್ಲಾ ದೇಶವಾಸಿಗಳಿಗೆ ಶುಭಾಶಯಗಳು” ಎಂದು ಟ್ವೀಟ್‌ ಮಾಡಿದ್ದಾರೆ.

ತ್ಯಾಗ, ತಪಸ್ಸು, ಸಂಯಮ ಮತ್ತು ಸಂಕಲ್ಪವನ್ನು ಆಧರಿಸಿದ ಮರ್ಯಾದಾ ಪುರುಷೋತ್ತಮ ಭಗವಾನ್ ರಾಮಚಂದ್ರನ ಜೀವನವು ಪ್ರತಿ ಯುಗದಲ್ಲೂ ಮಾನವೀಯತೆಗೆ ಸ್ಫೂರ್ತಿಯಾಗಿ ಉಳಿಯುತ್ತದೆ ಎಂದು ಅವರು ಹೇಳಿದ್ದಾರೆ.

ರಾಮ ನವಮಿಯು ಹಿಂದೂ ಹಬ್ಬವಾಗಿದ್ದು, ವಿಷ್ಣುವಿನ ಅವತಾರವಾದ ಭಗವಾನ್ ರಾಮನ ಜನ್ಮವನ್ನು ಗೌರವಿಸುವ ಸಲುವಾಗಿ ಆಚರಿಸಲಾಗುತ್ತದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!