ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ವರದಿ, ವಿಜಯಪುರ:
ಬೈಕ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿಯಾಗಿ, ಬೈಕ್ ಸವಾರರಿಬ್ಬರು ಸ್ಥಳದಲ್ಲಿ ಸಾವಿಗೀಡಾದ ಘಟನೆ ನಗರ ಹೊರ ಭಾಗದ ಸೊಲ್ಲಾಪುರ ರಸ್ತೆಯ ಹೆದ್ದಾರಿಯಲ್ಲಿ ಗುರುವಾರ ತಡ ರಾತ್ರಿ ನಡೆದಿದೆ.
ಮೃತಪಟ್ಟವರನ್ನು ಹಂಚನಾಳ ತಾಂಡಾದ ವಿನೋದ ಮಾರುತಿ ಮಾನೆ (17), ರವೀಂದ್ರ ರಾಜು ಚವ್ಹಾಣ (21) ಎಂದು ಗುರುತಿಸಲಾಗಿದೆ.
ಈ ಯುವಕರು, ಸಂಬಂಧಿಕರ ಮುದುವೆ ಮುಗಿಸಿಕೊಂಡು ನಗರಕ್ಕೆ ಬೈಕ್ ನಲ್ಲಿ ಬರುತ್ತಿದ್ದ ವೇಳೆ ಅಪಘಾತ ನಡೆದಿದೆ. ಅಪಘಾತ ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.