ಲಾರಿ-ಬೈಕ್‌ ಡಿಕ್ಕಿ: ತಾಯಿ-ಮಗ ಸೇರಿ ಮೂವರು ದಾರುಣ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಲಾರಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.

ಅನಿತಾ (40), ಬಾಲಾಜಿ (18), ಪವನ್ (20) ಮೃತ ದುರ್ದೈವಿಗಳು. ಮೃತರನ್ನು ತಾಯಿ-ಮಗ ಹಾಗೂ ಅಣ್ಣನ ಮಗ ಎಂದು ಹೇಳಲಾಗಿದೆ.

ಕೊರಟಗೆರೆ ತಾಲೂಕಿನ ಅರಸಾಪುರ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಒಂದೇ ಕುಟುಂಬದ ಮೂವರು ದ್ವಿಚಕ್ರ ವಾಹನದಲ್ಲಿ ಮಧುಗಿರಿಯಿಂದ ಗೌರಿಬಿದನೂರು ಕಡೆಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ಎದುರಿನಿಂದ ಬಂದ ಲಾರಿಗೆ ಬೈಕ್ ಡಿಕ್ಕಿ ಹೊಡೆದಿದೆ. ಅದರ ಪರಿಣಾಮ ಚಕ್ರದಡಿ ಸಿಲುಕಿ ಗಂಭೀರ ಗಾಯಗೊಂಡು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ.

ಅಪಘಾತದ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಕೊರಟಗೆರೆ ಠಾಣೆ ಪೊಲೀಸರು ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!