Tuesday, August 9, 2022

Latest Posts

ಲಾರಿ- ಬೈಕ್ ಡಿಕ್ಕಿ: ಮುಖ್ಯೋಪಾಧ್ಯಾಯ, ಶಿಕ್ಷಕ ಸ್ಥಳದಲ್ಲೇ ಸಾವು

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸ ದಿಗಂತ ವರದಿ,  ವಿಜಯಪುರ:

ಲಾರಿ- ಬೈಕ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಮುಖ್ಯೋಪಾಧ್ಯಾಯ, ಶಿಕ್ಷಕ ಸೇರಿ ಇಬ್ಬರು ಸ್ಥಳದಲ್ಲೇ ಸಾವಿಗೀಡಾದ ಘಟನೆ ನಗರ ಹೊರ ವಲಯ ರಾಷ್ಟ್ರೀಯ ಹೆದ್ದಾರಿ, ಸೊಲ್ಲಾಪುರ ರಸ್ತೆಯ ಹುಂಡೇಕಾರ ಪೆಟ್ರೋಲ್ ಬಂಕ್ ಬಳಿ ಶನಿವಾರ ಸಂಜೆ ನಡೆದಿದೆ.
ಮೃತಪಟ್ಟವರನ್ನು ವಿಜಯಪುರ ತಾಲೂಕಿನ ಬರಟಗಿ ಎಲ್ ಟಿ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯ ಕೆ.ಎಚ್. ಹುದ್ದಾರೆ (59), ಶಿಕ್ಷಕ ಸಿದ್ದನಗೌಡ ಪಾಟೀಲ (54) ಎಂದು ಗುರುತಿಸಲಾಗಿದೆ.
ಈ ಶಿಕ್ಷಕರಿಬ್ಬರು ನಗರಕ್ಕೆ ಬೈಕ್ ನಲ್ಲಿ ಬರುತ್ತಿದ್ದಾಗ, ರಾಷ್ಟ್ರೀಯ ಹೆದ್ದಾರಿ ದಾಟುತ್ತಿದ್ದ ವೇಳೆ, ಬೈಕ್ ಹಾಗೂ ಲಾರಿ ಮಧ್ಯೆ ಅಪಘಾತವಾಗಿದೆ. ಇಬ್ಬರಿಗೂ ತೀವ್ರ ಪೆಟ್ಟಾಗಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಸಂಚಾರಿ ಪೊಲೀಸ್ ಠಾಣೆ ಪಿಎಸ್ ಐ ಸಂಜಯ ಕಲ್ಲೂರ ಹಾಗೂ ಸಿಬ್ಬಂದಿ ಸ್ಥಳಕ್ಕೆ ತೆರಳಿ, ಪರಿಶೀಲಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss