ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಿವಮೊಗ್ಗ-ಭದ್ರಾವತಿ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅಪಘಾತದ ಪರಿಣಾಮವಾಗಿ ಮತ್ತೊಬ್ಬ ವ್ಯಕ್ತಿ ಗಾಯಗೊಂಡಿದ್ದು, ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ಸಾಗಿಸಲಾಗಿದೆ. ಭದ್ರಾವತಿ ಕಡೆಗೆ ಹೋಗುತ್ತಿದ್ದ ಲಾರಿ ಹಾಗೂ ಎದುರಿನಿಂದ ಬರುತ್ತಿದ್ದ ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾಗಿ ಈ ಅವಘಡ ಸಂಭವಿಸಿದೆ.
ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಲಾರಿಗೆ ಡಿಕ್ಕಿ ಹೊಡೆಯುವ ಮೊದಲು ಬೈಕ್ ಮತ್ತೊಂದು ಬೈಕ್ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.