ಲಾರಿ-ಕಾರು ನಡುವೆ ಅಪಘಾತ: ಓರ್ವ ಸಾವು, ಇಬ್ಬರಿಗೆ ಗಾಯ

ಹೊಸದಿಗಂತ ವರದಿ, ಅಂಕೋಲಾ:

ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಓರ್ವ ಮೃತ ಪಟ್ಟು ಇಬ್ಬರಿಗೆ ಗಂಭೀರ  ಗಾಯಗಳಾಗಿರುವ ಘಟನೆ ಬುಧವಾರ ನಸುಕಿನ ಜಾವ ಅಂಕೋಲಾ ತಾಲೂಕಿನ ಹುಲಿದೇವರವಾಡ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.
ಮಂಗಳೂರು ಕಡೆಯಿಂದ ಬರುತ್ತಿದ್ದ ಲಾರಿಗೆ ಕೇರಳದಿಂದ ಗೋವಾಕ್ಕೆ ತೆರಳುತ್ತಿದ್ದ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದು, ಕಾರು ಲಾರಿಯ ಹಿಂಬಾಗದಲ್ಲಿ ಸೇರಿ ಸಂಪೂರ್ಣ ನುಜ್ಜು ಗುಜ್ಜಾಗಿದೆ. ಕಾರಿನಲ್ಲಿದ್ದ ವ್ಯಕ್ತಿ ಸ್ಥಳದಲ್ಲಿಯೇ ಮೃತ ಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿರುವ ಇಬ್ಬರನ್ನು ಕಾರವಾರ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದೆ. ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಮೃತ ಮತ್ತು ಗಾಯಗೊಂಡ ವ್ಯಕ್ತಿಗಳ ಹೆಸರುಗಳ ಕುರಿತು ಗೊಂದಲವಿದ್ದು, ಕೇರಳ ಮತ್ತು ಮಂಗಳೂರು ಗಡಿಯ ನಿವಾಸಿಗಳು ಎಂದು ತಿಳಿದು ಬಂದಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!