ಲಾರಿ-ಕಾರು ಮುಖಾಮುಖಿ ಡಿಕ್ಕಿ: ಓರ್ವ ಸಾವು-ಮೂವರಿಗೆ ಗಾಯ

ಹೊಸ ದಿಗಂತ ವರದಿ, ಮಡಿಕೇರಿ:

ಲಾರಿ ಮತ್ತು ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರು ಚಾಲಕ ಸ್ಥಳದಲ್ಲೇ ಸಾವಿಗೀಡಾದ ಘಟನೆ ಗೋಣಿಕೊಪ್ಪದ ಕೈಕೇರಿ ಬಳಿ ಸೋಮವಾರ ಮಧ್ಯಾಹ್ನ ನಡೆದಿದೆ.
ಕಾರು ಚಾಲಕ ಬಿಟ್ಟಂಗಾಲ ನಿವಾಸಿ ನಂದೇಟಿರ ಸದನ್ ಚಂಗಪ್ಪ (49) ಎಂಬವರೇ ಮೃತ ದುರ್ದೈವಿಯಾಗಿದ್ದು, ಕಾರಿನಲ್ಲಿದ್ದ ಇತರ ಮೂವರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸೋಮವಾರ ಮಧ್ಯಾಹ್ನ ವೀರಾಜಪೇಟೆ ಕಡೆಯಿಂದ ಮೈಸೂರಿಗೆ ತೆರಳುತ್ತಿದ್ದ ಲಾರಿ ಹಾಗೂ ಗೋಣಿಕೊಪ್ಪದಿಂದ ವೀರಾಜಪೇಟೆ ಕಡೆಗೆ ತೆರಳುತ್ತಿದ್ದ ವ್ಯಾಗನರ್ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.
ಗೋಣಿಕೊಪ್ಪ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗಾಯಾಳುಗಳಿಗೆ ಗೋಣಿಕೊಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ಚಿಕಿತ್ಸೆ ನೀಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!