ಹೊಸದಿಗಂತ ಡಿಜಿಟಲ್ ಡೆಸ್ಕ್:
ಲಾರಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕಟ್ಟೆಹೊಳೆ ಗೇಟ್ ಬಳಿ ನಡೆದಿದೆ.
ಬುಧವಾರ ಬೆಳಗಿನ ಜಾವ ಈ ಭೀಕರ ಅಪಘಾತ ಸಂಭವಿಸಿದ್ದು, ಮೃತಪಟ್ಟವರು ಇಬ್ಬರೂ ಬೈಕ್‌ನಲ್ಲಿದ್ದರು. ಮೃತರನ್ನು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ನಿವಾಸಿ ದೀಪಿಕಾ (22) ಮತ್ತು ತರೀಕೆರೆ ತಾಲೂಕಿನ ಬೇಲೇನಹಳ್ಳಿ ನಿವಾಸಿ ವಿಶ್ವಾಸ್ (22) ಎಂದು ಗುರುತಿಸಲಾಗಿದೆ.
ಸವಾರರಿಬ್ಬರೂ ಉದ್ಯೋಗಿಗಳಾಗಿದ್ದು ಒಂದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ಹೇಳಲಾಗುತ್ತಿದೆ.
ಅವರಿಬ್ಬರು ಬೆಳಗಿನ ಜಾವ ಬೈಕ್‌ನಲ್ಲಿ ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದ್ದು, ತರೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ನಡೆದಿದೆ.