ಹೊಸದಿಗಂತ ಡಿಜಿಟಲ್ ಡೆಸ್ಕ್:
ಕ್ರೂಸರ್ಗೆ ಲಾರಿ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ತಮಕೂರಿನಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.
ತುಮಕೂರು ತಾಲೂಕಿನ ಕೋರಾ ಬಳಿಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಈ ದುರಂತ ಸಂಭವಿಸಿದೆ. ಗಂಗಾವತಿ ಮೂಲದ ಶಂಕರ್ (35) ಮತ್ತು ಸತೀಶ್(40) ಮೃತ ದುರ್ದೈವಿಗಳು.
ಮೃತರು ಬೆಂಗಳೂರಿನ ಫ್ರೀಡಂಪಾರ್ಕ್ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದರು. ಈ ವೇಳೆ ಕೋರ ಸಮೀಪ ಕ್ರೂಸರ್ ಕಾರಿನ ಹಿಂಬದಿಯ ಟೈಯರ್ ಪಂಚ್ಚರ್ ಆಗಿತ್ತು. ಹೀಗಾಗಿ ಹೆದ್ದಾರಿ ಬದಿಯಲ್ಲಿ ಕಾರು ನಿಲ್ಲಿಸಿ ಟೈರ್ ಬದಲಿಸುತ್ತಿದ್ದ ವೇಳೆ ಲಾರಿ ಬಂದು ಕಾರಿಗೆ ಡಿಕ್ಕಿಯಾಗಿದೆ. ಕೂಡಲೇ ಲಾರಿಯ ಚಾಲಕ ಪರಾರಿಯಾಗಿದ್ದಾನೆ.
ಅಪಘಾತದಲ್ಲಿ ಮತ್ತೋರ್ವನಿಗೆ ಗಾಯಗಳಾಗಿದ್ದು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕೋರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.