ಹೊಸದಿಗಂತ ವರದಿ, ಅಂಕೋಲಾ:
ಖಾಸಗಿ ಬಸ್ಸಿಗೆ ಲಾರಿ ಡಿಕ್ಕಿ ಹೊಡೆದು ಇಬ್ಬರಿಗೆ ಗಾಯಗೊಂಡ ಘಟನೆ ಅಂಕೋಲಾ ತಾಲೂಕಿನ ಅಡ್ಲೂರ್ ಬಳಿ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಸಂಭವಿಸಿದೆ.
ಬೆಂಗಳೂರಿನಿಂದ ಅಂಕೋಲಾ ಕಡೆ ಬರುತ್ತಿದ್ದ ಸೀ ಬರ್ಡ್ ಟ್ರಾವೆಲ್ಸ್ ಗೆ ಸೇರಿದ ಖಾಸಗಿ ಬಸ್ಸಿಗೆ ಹುಬ್ಬಳ್ಳಿ ಕಡೆ ಹೋಗುತ್ತಿದ್ದ ಲಾರಿ ಡಿಕ್ಕಿ ಹೊಡೆದಿದ್ದು ಬಸ್ ಕ್ಲೀನರ್ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬಸವರಾಜ ಯಮುನಪ್ಪ ಬೆಳ್ಳಂಕಿ(23) ಮತ್ತು ಲಾರಿ ಚಾಲಕ ಮಂಜುನಾಥ ಅದಾನಪ್ಪ ಚಾಕ್ರಿ(20) ಎನ್ನುವವರು
ಗಾಯಗೊಂಡಿದ್ದಾರೆ.
ಬಸ್ ಚಾಲಕ ಈ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.