Thursday, July 7, 2022

Latest Posts

ಲಾರಿ ಡಿಕ್ಕಿ: ಬೈಕ್ ಸವಾರ ಸಾವು

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………………….

ಹೊಸ ದಿಗಂತ ವರದಿ, ಮೈಸೂರು:

ಲಾರಿಯೊಂದು ಡಿಕ್ಕಿ ಹೊಡೆದು ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ನಡೆದಿದೆ. ಬೈಕ್ ಸವಾರ ಪೈರೋಜ್ ಪಾಷ (33) ಮೃತಪಟ್ಟವ. ಈತ ಬೈಕ್‌ನಲ್ಲಿ ಹೋಗುತ್ತಿದ್ದಾಗ, ಎದುರಿನಿಂದ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆಯಿತು. ತೀವ್ರವಾಗಿ ಗಾಯಗೊಂಡ ಪೈರೋಜ್ ಪಾಷ ಸ್ಥಳದಲ್ಲಿಯೇ ಸಾವಿಗೀಡಾಗಿದ್ದು, ಘಟನೆ ಬಳಿಕ ಓಡಿ ಹೋಗಲು ಯತ್ನಿಸಿದ ಲಾರಿಚಾಲಕನನ್ನು ಸಾರ್ವಜನಿಕರೇ ಹಿಡಿದು, ಪೊಲೀಸರಿಗೆ ಒಪ್ಪಿಸಿದರು. ಈ ಬಗ್ಗೆ ಪಿರಿಯಾಪಟ್ಟಣ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss