Wednesday, August 17, 2022

Latest Posts

ಲಾರಿ-ಕಂಟೇನರ್ ಮಧ್ಯೆ ಡಿಕ್ಕಿ: ಸ್ಥಳದಲ್ಲೇ ಪ್ರಾಣಬಿಟ್ಟ ಚಾಲಕರು

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ವಂಟಮೂರಿ ಘಾಟ್‌ನಲ್ಲಿ ಪುಣೆ-ಬೆಂಗಳೂರು ರಸ್ತೆಯಲ್ಲಿ ಕಂಟೇನರ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಎರಡೂ ವಾಹನದ ಚಾಲಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಉತ್ತರಪ್ರದೇಶದ ನೀರಜ ಬಲ್ಲೂರ, ಮಹಾರಾಷ್ಟ್ರದ ರಾಜೇಂದ್ರ ದೋಯಿಪಡೆ ಮೃತರು.
ಶಿಗ್ಗಾವಿ ಕಡೆಯಿಂದ ಮಹಾರಾಷ್ಟ್ರಕ್ಕೆ ಮೆಕ್ಕೆಜೋಳದ ಹಿಟ್ಟುಗಳ ಚೀಲ ತುಂಬಿಕೊಂಡು ಹೋಗುತ್ತಿದ್ದ ಕಂಟೇನರ್, ಮಹಾರಾಷ್ಟ್ರ ಕಡೆಯಿಂದ ಬೆಳಗಾವಿಗೆ ಈರುಳ್ಳಿ ಚೀಲಗಳನ್ನು ತುಂಬಿಕೊಂಡು ಬರುತ್ತಿದ್ದ ಲಾರಿಗೆ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಕಂಟೇನರ್ ಮೇಲ್ಭಾಗ ಕಿತ್ತು ಹೋಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!