ಹೊಸದಿಗಂತ ಡಿಜಿಟಲ್ ಡೆಸ್ಕ್:
ನನ್ನ ಮುಂದಿದ್ದ ಕಾರನಲ್ಲಿದ್ದವರನ್ನು ಬಚಾವ್ ಮಾಡಲು ಹೋಗಿ ಹೀಗಾಯ್ತು ಎಂದು ನೆಲಮಂಗಲದಲ್ಲಿ ನಡೆದ ಸರಣಿ ಅಪಘಾತದ ಬಗ್ಗೆ ಲಾರಿ ಚಾಲಕ ಆರೀಫ್ ಹೇಳಿದ್ದಾರೆ.
ಡಾಬಸ್‌ಪೇಟೆಯಿಂದ ಬೆಂಗಳೂರಿನ ಕಡೆಗೆ ನಾನು ಬರುತ್ತಿದ್ದೆ. ನನ್ನ ಮುಂದಿನ ಕಾರನ್ನು ಸೇಫ್ ಮಾಡಲು ಹೋಗಿ ಹೀಗೆ ಆಗಿದೆ. ಲಾರಿ ಡಿವೈಡರ್ ದಾಟಿ ಮುಂದಿನ ರಸ್ತೆಗೆ ಪಲ್ಟಿ ಆಯ್ತು. ನನ್ನ ಮುಂದಿನ ಕಾರಿನಿಂದಾಗಿ ಹೀಗೆ ಆಯ್ತು. ನನಗೆ ತುಂಬಾ ನೋವಾಗ್ತಿದೆ. ಅಲ್ಲಿ ಏನಾಯ್ತು ಆಮೇಲೆ ಅನ್ನೋದು ಗೊತ್ತಿಲ್ಲ. ಕಾರಿನ ಮೇಲೆ ನನ್ನ ಲಾರಿ ಪಲ್ಟಿಯಾಗಿತ್ತು ಎಂದು ಬೇಸರದಲ್ಲಿ ಮಾತನಾಡಿದ್ದಾರೆ.
ನೆಲಮಂಗಲದ ಟಿ.ಬೇಗೂರು ಬಳಿಯ ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿಇಂದು ಮಧ್ಯಾಹ್ನ ನಡೆದ ಎರಡು ಕಾರು, ಎರಡು ಲಾರಿ ಹಾಗೂ ಸ್ಕೂಲ್ ಬಸ್ ನಡುವಿನ ಸರಣಿ ಅಪಘಾತದಲ್ಲಿ ಒಂದೇ ಕುಟುಂಬದ 6 ಮಂದಿ ದುರ್ಮರಣಕ್ಕೀಡಾಗಿದ್ದರು.