ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಂಚಾರಿ ಪೊಲೀಸರು ಚಾಲಕನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ರೊಚ್ಚಿಗಿದ್ದ ಚಾಲಕರು ಕಂಟೈನರ್‌ಗಳ ಮೂಲಕ ನೈಸ್ ರಸ್ತೆಯನ್ನೇ ಬಂದ್ ಮಾಡಿದ್ದಾರೆ.
ಎಲೆಕ್ಟ್ರಾನಿಕ್ ಸಿಟಿ ಪಿಇಎಸ್ ಕಾಲೇಜು ಬಳಿಯ ನೈಸ್ ರಸ್ತೆಯಲ್ಲಿ ಬುಧವಾರ ರಾತ್ರಿ 8:30ಕ್ಕೆ ಈ ಘಟನೆ ನಡೆದಿದೆ. ಒಂದು ಗಂಟೆಗೂ ಅಧಿಕ ಸಮಯ ರಸ್ತೆ ಬ್ಲಾಕ್ ಮಾಡಿದ ಚಾಲಕರು ಪ್ರತಿಭಟನೆ ನಡೆಸಿದರು.
ಪೊಲೀಸರ ವಿರುದ್ಧ ಘೋಷಣೆ ಹಾಕುತ್ತಾ ನೈಸ್ ರಸ್ತೆ ಹಾಗೂ ಸರ್ವಿಸ್ ರಸ್ತೆಗಳನ್ನು ಚಾಲಕರು ಬ್ಲಾಕ್ ಮಾಡಿದ್ದರು. ದಿಢೀರ್ ಪ್ರತಿಭಟನೆಯಿಂದ ಸಿಲ್ಕ್ ಬೋರ್ಡ್‌ನಿಂದ ಹೊಸೂರು ರಸ್ತೆ, ಎಲೆಕ್ಟ್ರಾನಿಕ್ ಸಿಟಿಯಿಂದ ಬೊಮ್ಮನಹಳ್ಳಿ ಮಾರ್ಗದಲ್ಲಿ ಒಂದು ಗಂಟೆಗೂ ಅಧಿಕ ಕಾಲ ಟ್ರಾಫಿಕ್ ಜಾಮ್ ಆಗಿತ್ತು.