ನದಿಗೆ ಉರುಳಿ ಬಿದ್ದ ಲಾರಿ: ಚಾಲಕ ದಾರುಣ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ತುಂಗಭದ್ರಾ ನದಿಯ ಸೇತುವೆಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ನದಿಗೆ ಉರುಳಿ ಬಿದ್ದಿದ್ದು, ಚಾಲಕ ಮೃತಪಟ್ಟಿರುವ ಘಟನೆ ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ನಡೆದಿದೆ.

ಮೈನ್ಸ್ ತುಂಬಿದ್ದ ಲಾರಿ ಅತಿವೇಗವಾಗಿ ಬಂದು ಸೇತುವೆಯ ತಡೆಗೋಡೆಗೆ ಡಿಕ್ಕಿಯಾದುದರಿಂದ ಈ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತಪಟ್ಟ ಚಾಲಕ ಬಿಹಾರ್ ಮೂಲದವರು ಎಂದು ತಿಳಿದುಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!