September 1, 2026
Tuesday, September 1, 2026
spot_img

ಜಾನುವಾರುಗಳಿಗೆ ಡಿಕ್ಕಿ ಹೊಡೆದ ಲಾರಿ: ಎರಡು ಮೂಕಜೀವಿಗಳ ದಾರುಣ ಸಾ*ವು

ಹೊಸದಿಗಂತ ವರದಿ ಮುಂಡಗೋಡ:

ಅಪರಿಚಿತ ಲಾರಿಯೊಂದು ಜಾನುವಾರುಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಒಂದು ಆಕಳು ಹಾಗೂ ಒಂದು ಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರ ಮಳಗಿ ಸಮೀಪ ನಡೆದಿದೆ.

ಮಂಗಳವಾರ ಬೆಳಿಗ್ಗಿನ ಜಾವ ಯಾವುದೋ ಅಪರಿಚಿತ ಲಾರಿಯೊಂದು ರಸ್ತೆ ಮೇಲೆ ಸಂಚರಿಸುತ್ತಿದ್ದ ಜಾನುವಾರುಗಳಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಒಂದು ಆಕಳು ಹಾಗೂ ಒಂದು ಕರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿವೆ. ಅಪಘಾತದ ಬಳಿಕ ಲಾರಿ ಚಾಲಕ ವಾಹನವನ್ನು ನಿಲ್ಲಿಸದೆ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

ಘಟನೆ ತಿಳಿದು ಮಳಗಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ಕಾರಣವಾದ ಲಾರಿ ಹಾಗೂ ಅದರ ಚಾಲಕನ ಪತ್ತೆಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.

ಇದನ್ನೂ ಓದಿ:

ರಸ್ತೆಗಳಲ್ಲಿ ಜಾನುವಾರುಗಳು ಸಂಚರಿಸುತ್ತಿರುವುದರಿಂದ ವಾಹನ ಸವಾರರು ರಾತ್ರಿ ವೇಳೆ ಹೆಚ್ಚಿನ ಎಚ್ಚರಿಕೆಯಿಂದ ವಾಹನ ಚಲಾಯಿಸಬೇಕು. ಜಾನುವಾರುಗಳಿಗೆ ಡಿಕ್ಕಿ ಹೊಡೆದ ಬಳಿಕ ವಾಹನ ನಿಲ್ಲಿಸದೆ ಪರಾರಿಯಾಗಿರುವುದು ಸಾರ್ವಜನಿಕರ ಆಕ್ರೋಶಕ್ಕೂ ಕಾರಣವಾಗಿದೆ.

ಅಪಘಾತಕ್ಕೆ ಕಾರಣವಾದ ಲಾರಿಯನ್ನು ಪತ್ತೆಹಚ್ಚಿ ಚಾಲಕನ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !