ಹೊಸದಿಗಂತ ವರದಿ ತುಮಕೂರು:
ಅಕ್ಕಿ ಮೂಟೆಗಳನ್ನು ಹೊತ್ತು ಆಂಧ್ರ ಪ್ರದೇಶದಿಂದ ಕೇರಳಕ್ಕೆ ತೆರಳುತ್ತಿದ್ದ ಲಾರಿಯೊಂದು ಅಡ್ಡ ಬಂದ ವಾಹನದಿಂದ ತಪ್ಪಿಸಿಕೊಳ್ಳಲು ಹೋಗಿ ಹೇಮಾವತಿ ನಾಲಿಗೆ ಉರುಳಿ ಬಿದ್ದು ಓರ್ವ ಚಾಲಕ ಸಾವನ್ನಪ್ಪಿದ್ದರೆ ಮತ್ತೊಬ್ಬ ಚಾಲಕ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕುಣಿಗಲ್ ತಾಲೂಕಿನ ಕೊತ್ತಗೆರೆ ಹೋಬಳಿ ರಾಜ್ಯ ಹೆದ್ದಾರಿ ತುಮಕೂರು ಕುಣಿಗಲ್ ಮೈಸೂರು ರಸ್ತೆ ಕುರುಡಿಹಳ್ಳಿ ಬಳಿ ಅಪಘಾತ ಸಂಭವಿಸಿದ್ದು ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ 45 ವರ್ಷದ ವೆಂಕಟೇಶ ಎಂಬ ಚಾಲಕ ಸ್ಥಳದಲ್ಲಿ ಸಾವನ್ನಪ್ಪಿದ್ದರೆ, ಮತ್ತೊಬ್ಬ ಚಾಲಕ ಮಧು ತೀವ್ರ ಗಾಯಗೊಂಡು ತುಮಕೂರಿನ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಇದನ್ನೂ ಓದಿ:
ಬುಧವಾರ ರಾತ್ರಿ ಆಂಧ್ರ ಪ್ರದೇಶದದಿಂದ ತುಮಕೂರು ಕುಣಿಗಲ್ ಮೈಸೂರು ಮಾರ್ಗವಾಗಿ ಕೇರಳಕ್ಕೆ ಅಕ್ಕಿಯನ್ನು ಸಾಗಿಸುತ್ತಿದ್ದ ಲಾರಿಗೆ ಕುರುಡಿಹಳ್ಳಿ ಹತ್ತಿರವಿರುವ ನಾಲೆಯ ಸಮೀಪ ಮತ್ತೊಂದು ವಾಹನ ಅಡ್ಡ ಬಂದಿದ್ದರಿಂದ ತಪ್ಪಿಸಿಕೊಳ್ಳಲು ಹೋಗಿ ಬಲಭಾಗದಲ್ಲಿ ರುವ ನೀರು ಹರಿಯುತ್ತಿದ್ದ ನಾಲಿಗೆ ಉರುಳಿ ಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕುಣಿಗಲ್ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



