ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ದಿಗಂತ ವರದಿ ಮಡಿಕೇರಿ:
ವಾಯುವಿಹಾರಕ್ಕೆ ತೆರಳಿದ ಪಾದಚಾರಿ ಮಹಿಳೆ ಮೇಲೆ ಲಾರಿ ಪಲ್ಟಿಯಾಗಿ ಆಕೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸುಂಟಿಕೊಪ್ಪದಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.
ಮೃತರನ್ನು ಹಾಸನ ಜಿಲ್ಲೆಯ ರಾಮನಾಥಪುರ ನಿವಾಸಿ ದಿಲ್ ಶಾದ್(53) ಎಂದು ಗುರುತಿಸಲಾಗಿದೆ.
ಸೋಮವಾರ ಬೆಳಗ್ಗೆ ಸುಂಟಿಕೊಪ್ಪದ ಗದ್ದೆಹಳ್ಳ ಬಳಿ ದಿಲ್ ಶಾದ್ ಅವರು ನಡೆದುಕೊಂಡು ಹೋಗುತ್ತಿದ್ದಾಗ ಮೈಸೂರು ಕಡೆಯಿಂದ ಮಡಿಕೇರಿಯತ್ತ ಟಿವಿಎಸ್ ದ್ವಿಚಕ್ರ ವಾಹನ ಸಾಗಿಸುತ್ತಿದ್ದ ಲಾರಿ ಅವರ ಮೇಲೆ ಮಗುಚಿ ಬಿದ್ದಿದೆ. ಪರಿಣಾವಾಗಿ ಆಕೆಯ ದೇಹ ಗುರುತು ಸಿಗಲಾರದಷ್ಟು ನಜ್ಜುಗುಜ್ಜಾಗಿ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಲಾರಿಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸುಂಟಿಕೊಪ್ಪ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.