April 25, 2026
Saturday, April 25, 2026
spot_img

ಷೇರು ಮಾರುಕಟ್ಟೆಯಲ್ಲಿ ಲಾಸ್, ಆರ್ಥಿಕ ಒತ್ತಡ: ಮನನೊಂದು ಆತ್ಮಹ*ತ್ಯೆ ಮಾಡಿಕೊಂಡ ವ್ಯಕ್ತಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು ನಗರದ ಹೆಬ್ಬಾಳ ಪ್ರದೇಶದಲ್ಲಿ ಮನನೊಂದು ವ್ಯಕ್ತಿಯೊಬ್ಬರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಷೇರು ಮಾರುಕಟ್ಟೆಯಲ್ಲಿ ಉಂಟಾದ ನಷ್ಟ ಮತ್ತು ಆರೋಗ್ಯ ಸಮಸ್ಯೆಯಿಂದಾಗಿ ಈ ತೀವ್ರ ನಿರ್ಧಾರ ತೆಗೆದುಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಮೃತ ವ್ಯಕ್ತಿಯನ್ನು ವೆಂಕಟೇಶ್ (50) ಎಂದು ಗುರುತಿಸಲಾಗಿದೆ.

ಕೆಲ ದಿನಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ಕುಟುಂಬ ಮೂಲಗಳು ತಿಳಿಸಿವೆ. ಇದರ ಜೊತೆಗೆ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ ಹಣದಲ್ಲಿ ದೊಡ್ಡ ಪ್ರಮಾಣದ ನಷ್ಟವಾಗಿದ್ದು, ಆರ್ಥಿಕ ಒತ್ತಡವೂ ಹೆಚ್ಚಾಗಿತ್ತು ಎನ್ನಲಾಗಿದೆ.

ಇದನ್ನೂ ಓದಿ:

ಮಾಹಿತಿಯ ಪ್ರಕಾರ ವೆಂಕಟೇಶ್ ಮೇಲೆ ಸಾಲದ ಒತ್ತಡವೂ ಹೆಚ್ಚಾಗಿತ್ತು. ಆರ್ಥಿಕ ಸಂಕಷ್ಟ ಮತ್ತು ಆರೋಗ್ಯ ಸಮಸ್ಯೆಗಳ ಕಾರಣದಿಂದ ಮನನೊಂದು ಅವರು ಹೆಬ್ಬಾಳ ಸಮೀಪದ ರೈಲ್ವೆ ಹಳಿ ಬಳಿ ಹೋಗಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯ ಮಾಹಿತಿ ತಿಳಿದ ಕೂಡಲೇ ಬೈಯಪ್ಪನಹಳ್ಳಿ ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಪ್ರಕರಣ ದಾಖಲಿಸಿ ಮುಂದಿನ ತನಿಖೆ ಮುಂದುವರಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !