ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್‌ನಲ್ಲಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಮತ್ತೆ ದೇವೇಗೌಡರ ಮನೆ ಬಾಗಿಲಿನತ್ತ ವೈಎಸ್ವಿ ದತ್ತಾ ಭೇಟಿ ನೀಡಿದ್ದಾರೆ.
ಬೆಂಗಳೂರು ನಗರದ ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ ದತ್ತಾ ಅವರು ಟಿಕೆಟ್ (JDS Ticket) ನೀಡುವಂತೆ ಮನವಿ ಮಾಡಿದ್ದಾರೆ. ಕಾಂಗ್ರೆಸ್ ಟಿಕೆಟ್ ಕೈತಪ್ಪಿದ್ದಕ್ಕೆ ತೀವ್ರ ಅಸಮಾಧಾನಗೊಂಡಿರುವ ವೈಎಸ್ವಿ ದತ್ತಾ ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ತೀರ್ಮಾನಿಸಿದ್ದರು. ಈ ನಡುವೆ ಕೊನೆಯ ಪ್ರಯತ್ನ ಮಾಡಿದ್ದಾರೆ.
ಕಾಂಗ್ರೆಸ್‌ನಲ್ಲಿ ಕಡೂರು ಕ್ಷೇತ್ರದಿಂದ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಬೇಸರಗೊಂಡಿದ್ದ ದತ್ತ, ಸ್ವಾಭಿಮಾನಿಯಾಗಿ ಚುನಾವಣೆ ನಡೆಸುವುದಾಗಿ ಹೇಳಿದ್ದರು. ಬೆಂಬಲಿಗರ ಸಭೆಯನ್ನು ಕರೆದು ಟವೆಲ್ ಹಿಡಿದು ಭಿಕ್ಷೆ ಬೇಡಿದ್ದರು.
ಇದರ ನಡುವೆ ಜೆಡಿಎಸ್‌ನಿಂದ ಚುನಾವಣೆ ಎದುರಿಸಿದರೆ ಗೆಲ್ಲುವ ಸಾಧ್ಯತೆ ಇರುವ ಕಾರಣ ಎಚ್.ಡಿ. ದೇವೇಗೌಡರ ಮೂಲಕ ಪ್ರಸ್ತಾವನೆ ಇಟ್ಟಿದ್ದಾರೆ.
ಆದರೆ ದೇವೇಗೌಡರು ಯಾವುದೇ ತೀರ್ಮಾನವನ್ನು ತಿಳಿಸಿಲ್ಲ.ಎಚ್.ಡಿ. ಕುಮಾರಸ್ವಾಮಿಯವರ ಗಮನಕ್ಕೆ ತರುತ್ತೇನೆ. ಅವರೇ ತೀರ್ಮಾನ ಮಾಡುತ್ತಾರೆ ಎಂದು ಹೇಳಿ ಕಳಿಸಿದ್ದಾರೆ ಎನ್ನಲಾಗಿದೆ.