ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ನಾಲ್ಕು ವಿಧಾನಸಭಾ ಕ್ಷೇತ್ರಗಳ ಮತಎಣಿಕೆ ನಡೆಯುತ್ತಿದ್ದು, ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.
ಬೆಳಗ್ಗೆ 10:30ಕ್ಕೆ ರಾಜಸ್ಥಾನದಲ್ಲಿ ಬಿಜೆಪಿ 105 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ 77 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.
ಛತ್ತೀಸ್‌ಗಡದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಸಮಾನವಾಗಿ ಮುನ್ನಡೆಯುತ್ತಿವೆ, ಎರಡೂ ಪಕ್ಷಗಳು 44 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿವೆ.
ಮಧ್ಯಪ್ರದೇಶದಲ್ಲಿ ಬಿಜೆಪಿ 163 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ ಕಾಂಗ್ರೆಸ್ 63ಕ್ಷೇತ್ರಗಳಲ್ಲಿ ಮಾತ್ರ ಮುನ್ನಡೆ ಸಾಧಿಸಿದೆ.