ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಹೊರವಲಯದ ನೈಸ್ ರಸ್ತೆ ಸಮೀಪದ ಕೆರೆಗೆ ಹಾರಿ ಯುವ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಕಾಲೇಜು ವಿದ್ಯಾರ್ಥಿನಿ ಅಂಜನಾ(20) ಮತ್ತು ಶ್ರೀಕಾಂತ್(25) ಸಾವನ್ನಪ್ಪಿರುವ ದುರ್ದೈವಿಗಳಾಗಿದ್ದಾರೆ. ಜುಲೈ 1ರಂದು ಪ್ರೇಮಿಗಳು ನಾಪತ್ತೆಯಾಗಿದ್ದರು. ಶ್ರೀಕಾಂತ್‌ಗೆ ಬೇರೊಂದು ಮದುವೆಯಾಗಿದ್ದು, ಮದುವೆಯಾದರೂ ಅಂಜನಾಳನ್ನು ಇಷ್ಟಪಡುತ್ತಿದ್ದ.
ಕಳೆದ ಕೆಲ ವರ್ಷಗಳಿಂದ ಇಬ್ಬರು ಪರಸ್ಪರ ಪ್ರೀತಿಸ್ತಿದ್ದರು. ಆದರೆ ಯುವಜೋಡಿಯ ಪ್ರೀತಿಗೆ ವಿದ್ಯಾರ್ಥಿನಿ ಪೋಷಕರಿಂದ ವಿರೋಧ ವ್ಯಕ್ತವಾಗಿತ್ತು. ವಿದ್ಯಾರ್ಥಿನಿ ತಲಘಟ್ಟಪುರ ಸಮೀಪದ ಅಂಜನಾಪುರ ಬಳಿ ವಾಸವಿದ್ದಳು. ಯುವಕ ಶ್ರೀಕಾಂತ್ ಕೋಣನಕುಂಟೆ ನಿವಾಸಿಯಾಗಿದ್ದ.
ಇಬ್ಬರೂ ಶವವಾಗಿ ಪತ್ತೆಯಾಗಿದ್ದಾರೆ. ನಮ್ಮ ಸಾವಿಗೆ ನಾವೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಜೋಡಿ ಆತ್ಮಹತ್ಯೆ ಮಾಡಿಕೊಂಡಿದೆ. ಇದನ್ನು ಕಂಡು ಪೋಷಕರು ಮರುಗಿದ್ದಾರೆ.