ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳು ಚಿತ್ರರಂಗದ ಖ್ಯಾತ ನಟಿ ತ್ರಿಷಾ ಕೃಷ್ಣನ್ ಮತ್ತೆ ಸುದ್ದಿಯಲ್ಲಿದ್ದಾರೆ. ನಟ ವಿಜಯ್ ಜೊತೆಗಿನ ಸಂಬಂಧದ ಬಗ್ಗೆ ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆ ನಡೆಯುತ್ತಿರುವ ಸಮಯದಲ್ಲೇ, ತ್ರಿಷಾ ಹಂಚಿಕೊಂಡಿರುವ ಒಂದು ಇನ್‌ಸ್ಟಾಗ್ರಾಂ ಸ್ಟೋರಿ ಹೊಸ ಕುತೂಹಲಕ್ಕೆ ಕಾರಣವಾಗಿದೆ.
“ಪ್ರೀತಿಯೇ ಎಲ್ಲವೂ ಅಲ್ಲ, ಆದರೆ ಪ್ರೀತಿ ಇಲ್ಲದೆ ಎಲ್ಲವೂ ಅರ್ಥಹೀನ” ಎಂಬ ಸಾಲುಗಳು ಈಗ ಸಿನಿ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿವೆ.
ಇತ್ತೀಚೆಗೆ ವಿಜಯ್ ಅವರ ವೈಯಕ್ತಿಕ ಜೀವನದ ಬಗ್ಗೆ ಹರಿದಾಡುತ್ತಿರುವ ಸುದ್ದಿಗಳು ಹೆಚ್ಚು ಗಮನ ಸೆಳೆಯುತ್ತಿವೆ. ಅವರ ಪತ್ನಿ ಸಂಗೀತಾ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿರುವ ಬಗ್ಗೆ ವರದಿಗಳು ಹೊರಬಂದಿದ್ದು, ಅದರಲ್ಲಿ ಪತಿಗೆ ಮತ್ತೊಬ್ಬ ನಟಿಯೊಂದಿಗೆ ಆಪ್ತ ಸಂಬಂಧವಿದೆ ಎಂಬ ಆರೋಪಗಳೂ ಕೇಳಿಬಂದಿವೆ. ಈ ಹಿನ್ನೆಲೆ ತ್ರಿಷಾ ಹಂಚಿಕೊಂಡ ಪ್ರೀತಿಯ ಕುರಿತ ಸಾಲುಗಳು ಅಭಿಮಾನಿಗಳು ಮತ್ತು ನೆಟ್ಟಿಗರಲ್ಲಿ ಹಲವಾರು ಊಹಾಪೋಹಗಳಿಗೆ ಕಾರಣವಾಗಿವೆ.
ತ್ರಿಷಾ ದಕ್ಷಿಣ ಭಾರತದ ಬಹುಭಾಷಾ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ತಮಿಳು ಮಾತ್ರವಲ್ಲದೆ ತೆಲುಗು, ಮಲಯಾಳಂ ಹಾಗೂ ಕನ್ನಡದಲ್ಲೂ ಅವರು ಸಾಕಷ್ಟು ಅಭಿಮಾನಿಗಳಲ್ಲಿ ನಟಿಸಿದ್ದಾರೆ. ಕನ್ನಡದಲ್ಲಿ ಪುನೀತ್ ರಾಜಕುಮಾರ್ ಜೊತೆ ನಟಿಸಿದ ಪವರ್ ಚಿತ್ರದ ಮೂಲಕ ಕನ್ನಡ ಪ್ರೇಕ್ಷಕರಿಗೂ ಅವರು ಹೆಚ್ಚು ಪರಿಚಿತರಾದರು.
ಇದನ್ನೂ ಓದಿ:
ವಿಜಯ್ ಮತ್ತು ತ್ರಿಷಾ ಅವರ ಸ್ನೇಹವೂ ಬಹಳ ವರ್ಷಗಳ ಹಿಂದಿನಿಂದಲೇ ಇದೆ. ಇಬ್ಬರೂ ಹಲವು ಸೂಪರ್ ಹಿಟ್ ಸಿನಿಮಾಗಳಲ್ಲಿ ಒಟ್ಟಿಗೆ ನಟಿಸಿದ್ದಾರೆ. ‘ಗಿಲ್ಲಿ’, ‘ತಿರುಪಾಚಿ’ ‘ಆತಿ’ , ‘ಕುರುವಿ’ ಮತ್ತು ಇತ್ತೀಚಿನ ಲಿಯೋ ಸಿನಿಮಾಗಳಲ್ಲಿ ಇವರ ಜೋಡಿ ಮೆಚ್ಚುಗೆ ಪಡೆದಿತ್ತು. ಸುಮಾರು ಎರಡು ದಶಕಗಳ ಈ ಸಿನಿಮಾ ಬಾಂಧವ್ಯ ಈಗ ಮತ್ತೆ ಸುದ್ದಿಯಾಗುತ್ತಿದೆ.
ಇತ್ತೀಚೆಗೆ ಚೆನ್ನೈನಲ್ಲಿ ನಡೆದ ಒಂದು ಮದುವೆ ಸಮಾರಂಭದಲ್ಲಿ ವಿಜಯ್ ಮತ್ತು ತ್ರಿಷಾ ಒಟ್ಟಿಗೆ ಕಾಣಿಸಿಕೊಂಡ ಬಳಿಕ ಈ ಚರ್ಚೆಗಳು ಇನ್ನಷ್ಟು ವೇಗ ಪಡೆದುಕೊಂಡಿವೆ. ಈ ಸಂದರ್ಭದ ಫೋಟೋಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಅದಾದ ಕೆಲವೇ ದಿನಗಳಲ್ಲಿ ತ್ರಿಷಾ ಹಂಚಿಕೊಂಡ ಪ್ರೀತಿಯ ಕುರಿತ ಪೋಸ್ಟ್ ಹೊಸ ಚರ್ಚೆಗೆ ನಾಂದಿ ಹಾಡಿದೆ.
ಆದರೆ ಈ ಎಲ್ಲ ವಿಚಾರಗಳ ಬಗ್ಗೆ ವಿಜಯ್ ಅಥವಾ ತ್ರಿಷಾ ಅಧಿಕೃತವಾಗಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಹೀಗಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಬಹುತೇಕ ಮಾಹಿತಿ ಊಹಾಪೋಹಗಳ ಮಟ್ಟದಲ್ಲೇ ಉಳಿದಿದೆ.



