ಲವ್ ಜಿಹಾದ್ ಆರೋಪ: ನಟಿ ದಿವ್ಯಾ ಶ್ರೀಧರ್‌ ಪತಿ ಅಮ್ಜಾದ್ ಖಾನ್ ಅರೆಸ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಆಕಾಶದೀಪ ಧಾರವಾಹಿ ನಟಿ ದಿವ್ಯಾ ಶ್ರೀಧರ್‌ ಅವರ ಪತಿ ಅಮ್ಜಾದ್ ಖಾನ್ ಅವರನ್ನು ಪೊಲಿಸರು ತಮಿಳುನಾಡಿನಲ್ಲಿ ಬಂಧಿಸಿದ್ದಾರೆ.
ತನಗೆ ಸುಳ್ಳು ಹೇಳಿ ಮದುವೆ ಆಗಿದ್ದಾನೆ, ತನ್ನ ಮೇಲೆ ಹಲ್ಲೆ ಮಾಡಿದ್ದಾನೆ ಹಾಗೂ ಲವ್ ಜಿಹಾದ್ ಆರೋಪವನ್ನೂ ಪತಿಯ ಮೇಲೆ ಹೊರೆಸಿ ದಿವ್ಯಾ ದೂರು ನೀಡಿದ್ದರು. ಈ ದೂರಿನಲ್ಲಿ ಪತಿಯು ಹಲ್ಲೆಯಿಂದಾಗಿ ಗರ್ಭಪಾತದ ಭಯವೂ ಕಾಡುತ್ತಿದೆ ಎಂದು ಉಲ್ಲೇಖಿಸಿದ್ದರು. ಈ ದೂರಿನ ಅನ್ವಯ ಅಮ್ಜಾದ್ ಖಾನ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಮೊನ್ನೆಯಷ್ಟೇ ಆಸ್ಪತ್ರೆಯಿಂದ ಸೀದಾ ಪತಿ ಅಮ್ಜಾದ್ ಖಾನ್ ಮನೆಗೆ ಹೋಗಿರುವ ದಿವ್ಯಾ ಶ್ರೀಧರ್, ತನಗೆ ಈ ರೀತಿ ಯಾಕೆ ಮೋಸ ಮಾಡಿದೆ ಎಂದು ಪ್ರಶ್ನಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!