Friday, September 19, 2025

ಕನ್ನಡದ ಜಯಪ್ರಿಯ ಯೂಟ್ಯೂಬರ್ ಮುಕಳೆಪ್ಪ ವಿರುದ್ಧ ಲವ್‌ ಜಿಹಾದ್ ಆರೋಪ: ದೂರು ದಾಖಲು

ಹೊಸದಿಗಂತ ಧಾರವಾಡ:

ಸಾಮಾಜಿಕ ಜಾಲತಾಣದಲ್ಲಿ ಕಾಮಿಡಿ ವೀಡಿಯೋಗಳ ಮೂಲಕವೇ ಗಮನ ಸೆಳೆದಿರುವ ಖಾಜಾ ಶಿರಹಟ್ಟಿ ಉರ್ಫ್ ಮುಕಳೆಪ್ಪನ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದ್ದು, ಮುಕಳೆಪ್ಪನ ವಿರುದ್ದ ಭಜರಂಗದಳ ಕಾರ್ಯಕರ್ತರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಮುಕಳೆಪ್ಪ ಮೂಲತಃ ಇಸ್ಲಾಂ ಧರ್ಮಕ್ಕೆ ಸೇರಿದ್ದು, ಇವರು ಖೊಟ್ಟಿ ದಾಖಲೆ ಕೊಟ್ಟು ಹಿಂದೂ ಯುವತಿ ವಿವಾಹವಾಗಿದ್ದಾರೆ. ಈ ಬಗ್ಗೆ ಮುಂಡಗೋಡ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ರಿಜಿಸ್ಟರ್ ಮಾಡಿಕೊಳ್ಳುವ ಮೂಲಕ ಮುಕಳೆಪ್ಪ ವಿವಾಹವಾಗಿದ್ದಾರೆ ಎಂದು ಭಜರಂಗದಳ ಕಾರ್ಯಕರ್ತರು ಆರೋಪಿಸಿದ್ದಾರೆ.

ಈ ಖಾಜಾ ಉರ್ಫ್ ಮುಕಳೆಪ್ಪ ಹಿಂದೂ ಯುವತಿಯರನ್ನೇ ಟಾರ್ಗೆಟ್ ಮಾಡಿ ವೀಡಿಯೋ ಮಾಡುತ್ತಾನೆ. ಶಾರ್ಟ್ ವೀಡಿಯೋದಲ್ಲಿ ಹಿಂದೂ ಯುವತಿಯರು ಹಾಗೂ ಧರ್ಮಕ್ಕೆ ಅವಮಾನ ಮಾಡುವ ರೀತಿಯಲ್ಲಿ ವೀಡಿಯೋ ಮಾಡುತ್ತಾನೆ ಎಂಬ ಆರೋಪ ಕೇಳಿಬಂದಿದೆ.

ಕಳೆದ ಜೂ.೫ಕ್ಕೆ ಕೊಟ್ಟಿ ದಾಖಲೆ ಕೊಟ್ಟು ಹಿಂದೂ ಯುವತಿ ಈತ ವಿವಾಹವಾಗಿದ್ದು, ಆತನ ವಿರುದ್ಧ ಕ್ರಮ ಕೈಗೊಳ್ಳುವಂತೆ ಇದೀಗ ಭಜರಂಗದಳ ಕಾರ್ಯಕರ್ತರು ಧಾರವಾಡ ಗ್ರಾಮೀಣ ಠಾಣೆಗೆ ದೂರು ನೀಡಿದ್ದಾರೆ.

ಸದ್ಯ ಮುಕಳೆಪ್ಪ ವಿವಾಹವಾಗಿರುವ ಯುವತಿಯನ್ನೂ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಸದ್ಯಕ್ಕಂತೂ ಮುಕಳೆಪ್ಪನ ವಿರುದ್ಧ ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಭಜರಂಗದಳ ಕಾರ್ಯಕರ್ತರು ದೂರು ಕೊಟ್ಟಿದ್ದು, ಇನ್ನೂ ಎಫ್‌ಐಆರ್ ದಾಖಲಾಗಿಲ್ಲ. ಪೊಲೀಸರು ಈ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ. ಹಿಂದೂ ಯುವತಿಯರನ್ನೇ ವೀಡಿಯೋದಲ್ಲಿ ಹಾಕಿಕೊಂಡು ಹಿಂದೂ ಧರ್ಮದ ಹಾಗೂ ಹಿಂದೂ ಆಚರಣೆಗಳನ್ನೇ ಟಾರ್ಗೆಟ್ ಮಾಡಿ ಮುಕಳೆಪ್ಪ ವೀಡಿಯೋಗಳನ್ನು ಮಾಡುತ್ತಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಭಜರಂಗದಳ ಕಾರ್ಯಕರ್ತರು ಆಗ್ರಹಿಸಿದ್ದಾರೆ

ಇದನ್ನೂ ಓದಿ