ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕ ಸಭಾ ಚುನಾವಣೆಯ ಕೊನೆಯ ಹಂತದ ಪ್ರಚಾರ ಭರ್ಜರಿಯಾಗಿ ನಡೆಯುತ್ತಿದ್ದು,ಜಾರ್ಖಂಡ್ನಲ್ಲಿ ಪ್ರಚಾರ ಸಭೆಯಲ್ಲಿ ಭಾಗವಹಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಅಲ್ಲಿನ ಆಡಳಿತಾರೂಢ ಜಾರ್ಖಂಡ್ ಮುಕ್ತಿ ಮೋರ್ಚಾದ (ಜೆಎಮ್ಎಮ್) ವಿರುದ್ಧ ಹಲವಾರು ಆರೋಪಗಳನ್ನು ಮಾಡಿದ್ದಾರೆ.
ಜಾರ್ಖಂಡ್ನ ದುಮ್ಕಾದಲ್ಲಿ ಮಂಗಳವಾರ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಹಿಂದು ಧರ್ಮಕ್ಕೆ ಅಪಾಯಕಾರಿಯಾಗಿ ಪರಿಣಮಿಸಿರುವ ‘ಲವ್ ಜಿಹಾದ್’ ಆರಂಭಗೊಂಡಿರುವುದೇ ಜಾರ್ಖಂಡ್ನಿಂದ ಎಂದು ಹೇಳಿದ್ದಾರೆ.
ಜೆಎಂಎಂ ನಿರಂತರವಾಗಿ ಕೋಮುವಾದಿ ರಾಜಕೀಯದಲ್ಲಿ ತೊಡಗಿದೆ . ಜಾರ್ಖಂಡ್ ನ ಒಂದು ಜಿಲ್ಲೆಯಲ್ಲಿ ಭಾನುವಾರದ ಸಾಂಪ್ರದಾಯಿಕ ರಜಾದಿನವನ್ನು ಶುಕ್ರವಾರಕ್ಕೆ ಬದಲಾಯಿಸಲಾಗಿದೆ ಎಂದು ಹೇಳಿದರು. ವಾಸ್ತವದಲ್ಲಿ ಭಾನುವಾರ ಹಿಂದುಗಳಿಗೆ ಸಂಬಂಧಿಸಿದ್ದಲ್ಲ ಕ್ರಿಶ್ಚಿಯನ್ ಸಮುದಾಯಕ್ಕೆ ಸಂಬಂಧಿಸಿದೆ. 200-300 ವರ್ಷಗಳಿಂದ ರಜಾದಿನವಾಗಿ ಪರಿಗಣಿಸಲಾಗಿದೆ. ಈಗ ಅದನ್ನು ಶುಕ್ರವಾರಕ್ಕೆ ಬದಲಾಯಿಸಲಾಗಿದೆ ಎಂದು ಮೋದಿ ಆರೋಪಿಸಿದ್ದಾರೆ.
ಜಾರ್ಖಂಡ್ ರಾಜ್ಯದಲ್ಲಿ ಹಣದ ಶಿಖರಗಳು ನಿರ್ಮಾಣಗೊಂಡಿವೆ. ಜೆಎಂಎಂ ಮತ್ತು ಕಾಂಗ್ರೆಸ್ ಮಿತಿಮೀರಿದ ಲೂಟಿಯಲ್ಲಿ ತೊಡಗಿವೆ ಎಂದು ಹೇಳಿದರು.
2014ಕ್ಕೂ ಮೊದಲು ಕಾಂಗ್ರೆಸ್ ದಿನದ 24 ಗಂಟೆಯೂ ಲೂಟಿಯಲ್ಲಿ ತೊಡಗಿದ್ದರಿಂದ ಹಗರಣಗಳು ಸಾಮಾನ್ಯವಾಗಿದ್ದವು, ಆದರೆ ತಾವು ಅಧಿಕಾರಕ್ಕೆ ಬಂದ ನಂತರ ಅದನ್ನು ನಿಲ್ಲಿಸಿಸಲಾಯಿತು ಎಂದು ಹೇಳಿದರು
ಜಾರ್ಖಂಡ್ನಲ್ಲಿ ಆಡಳಿತಾರೂಢ ಜೆಎಂಎಂ ನೇತೃತ್ವದ ಮೈತ್ರಿಕೂಟವು “ನುಸುಳುಕೋರರನ್ನು ಪೋಷಿಸುತ್ತಿದೆ” ಎಂದು ಅವರು ಆರೋಪಿಸಿದರು. ಬುಡಕಟ್ಟು ಜನರ ಭೂಮಿಯನ್ನು ನುಸುಳುಕೋರರು ವಶಪಡಿಸಿಕೊಳ್ಳುತ್ತಿದ್ದಾರೆ. ಅವರು ಮಹಿಳೆಯರಿಗೆ ಅಪಾಯವನ್ನುಂಟು ಮಾಡುತ್ತಿದ್ದಾರೆ” ಎಂದು ಆರೋಪಿಸಿದರು.
ಜಾರ್ಖಂಡ್ನಲ್ಲಿ ದೊಡ್ಡ ಬಿಕ್ಕಟ್ಟು ತಲೆದೋರಿದೆ. ಅದುವೇ ಒಳನುಸುಳುವಿಕೆ. ಸಂತಾಲ್ ಪರಗಣಗಳು ಒಳನುಸುಳುವಿಕೆಯ ಸವಾಲನ್ನು ಎದುರಿಸುತ್ತಿವೆ. ಅನೇಕ ಪ್ರದೇಶಗಳಲ್ಲಿ, ಬುಡಕಟ್ಟು ಜನರ ಜನಸಂಖ್ಯೆ ವೇಗವಾಗಿ ಕುಸಿಯುತ್ತಿದೆ ಮತ್ತು ಒಳನುಸುಳುವವರ ಸಂಖ್ಯೆ ಹೆಚ್ಚುತ್ತಿದೆ. ನುಸುಳುಕೋರರು ಬುಡಕಟ್ಟು ಜನರ ಭೂಮಿಯನ್ನು ಕಸಿದುಕೊಳ್ಳುತ್ತಿದ್ದಾರೆ. ಬುಡಕಟ್ಟು ಹೆಣ್ಣುಮಕ್ಕಳು ನುಸುಳುಕೋರರ ದಾಳಿಗೆ ಗುರಿಯಾಗಿದ್ದಾರೆ. ಅವರ ಭದ್ರತೆ ಮತ್ತು ಸುರಕ್ಷತೆ ಅಪಾಯದಲ್ಲಿದೆ. ಅವರ ಜೀವವೂ ಅಪಾಯದಲ್ಲಿದೆ ಎಂದು ಅವರು ಹೇಳಿದರು.