ಹೊಸದಿಗಂತ ಡಿಜಿಟಲ್ ಡೆಸ್ಕ್;
ಲವ್ ಜಿಹಾದ್ ಮತ್ತು ಬಲವಂತದ ಮತಾಂತರದ ವಿರುದ್ಧ ಕ್ರಮ ಕೈಗೊಳ್ಳಲು ಮಹಾರಾಷ್ಟ್ರ ಸರಕಾರ ಅಖಾಡಕ್ಕೆ ಇಳಿದಿದ್ದು, ಇದಕ್ಕಾಗಿ ಏಳು ಸದಸ್ಯರ ಸಮಿತಿಯನ್ನು ರಚಿಸಿದೆ.
ಈ ಸಮಿತಿಯು ಲವ್ ಜಿಹಾದ್ ಮತ್ತು ಬಲವಂತದ ಮತಾಂತರವನ್ನು ನಿಲ್ಲಿಸಲು ಕಾನೂನು ಕ್ರಮಗಳನ್ನು ಸೂಚಿಸುತ್ತದೆ.
ಮಹಾರಾಷ್ಟ್ರದ ಡಿಜಿಪಿ ಅವರನ್ನು ಈ ಸಮಿತಿಯ ಅಧ್ಯಕ್ಷರನ್ನಾಗಿ ಮಾಡಲಾಗಿದೆಮಹಾರಾಷ್ಟ್ರ ಸರ್ಕಾರ ರಚಿಸಿದ ಸಮಿತಿಯಲ್ಲಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತ ಇಲಾಖೆ, ಕಾನೂನು ಮತ್ತು ನ್ಯಾಯಾಂಗ ಇಲಾಖೆ, ಸಾಮಾಜಿಕ ನ್ಯಾಯ ಇಲಾಖೆ ಮತ್ತು ವಿಶೇಷ ಸಹಾಯ ಇಲಾಖೆಯ ಕಾರ್ಯದರ್ಶಿಗಳು ಮತ್ತು ಗೃಹ ಇಲಾಖೆಯ ಉಪ ಕಾರ್ಯದರ್ಶಿ ಕೂಡ ಇದ್ದಾರೆ.
ಅಧ್ಯಯನದ ನಂತರ, ಲವ್ ಜಿಹಾದ್ ಮತ್ತು ಬಲವಂತದ ಮತಾಂತರದ ಘಟನೆಗಳನ್ನು ಎದುರಿಸಲು ಯಾವ ಕ್ರಮಗಳನ್ನು ತೆಗೆದುಕೊಳ್ಳಬಹುದು ಎಂಬುದನ್ನು ಸಮಿತಿಯು ತಿಳಿಸುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಸಮಿತಿಯು ಇತರ ರಾಜ್ಯಗಳಲ್ಲಿ ಇದಕ್ಕೆ ಸಂಬಂಧಿಸಿದ ಕಾನೂನುಗಳನ್ನು ಸಹ ಅಧ್ಯಯನ ಮಾಡುತ್ತದೆ.