ಪ್ರಧಾನಿ ಮೋದಿಯವರಿಗೆ ಸಾಂತ್ವನ ಹೇಳಿದ ರಾಹುಲ್‌ ಗಾಂಧಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಇಂದು ಮುಂಜಾನೆ ತಮ್ಮ ತಾಯಿ ಹೀರಾಬೆನ್ ಅವರನ್ನು ಕಳೆದುಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಹುಲ್ ಗಾಂಧಿ ಸಾಂತ್ವನ ಹೇಳಿದ್ದಾರೆ.
“ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾ ಬಾ ಅವರ ಸಾವಿನ ಸುದ್ದಿ ಕೇಳಿ ಅತ್ಯಂತ ದುಃಖವಾಯಿತು. ಈ ಕಷ್ಟದ ಸಮಯದಲ್ಲಿ ನಾನು ಅವರಿಗೆ ಮತ್ತು ಅವರ ಕುಟುಂಬಕ್ಕೆ ನನ್ನ ಸಂತಾಪವನ್ನು ಹಾಗೂ ಪ್ರೀತಿಯನ್ನು ವ್ಯಕ್ತಪಡಿಸುತ್ತೇನೆ” ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
ರಾಹುಲ್ ಸಹೋದರಿ ಪ್ರಿಯಾಂಕಾ ವಾದ್ರಾ ಕೂಡ ಸಂತಾಪ ವ್ಯಕ್ತಪಡಿಸಿದ್ದಾರೆ.
“ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ತಾಯಿಯ ನಿಧನದ ದುಃಖದ ಸುದ್ದಿಯನ್ನು ಕೇಳಿದೆ. ಅಗಲಿದ ಪುಣ್ಯಾತ್ಮರಿಗೆ ದೇವರು ತನ್ನ ಪುಣ್ಯ ಪಾದಗಳಲ್ಲಿ ಸ್ಥಾನ ನೀಡಲಿ. ಈ ನೋವಿನ ಕ್ಷಣಗಳಲ್ಲಿ ಶ್ರೀ ನರೇಂದ್ರ ಮೋದಿ ಜೀ ಮತ್ತು ಅವರ ಕುಟುಂಬದ ಎಲ್ಲ ಸದಸ್ಯರಿಗೆ ಧೈರ್ಯ ನೀಡಲಿ” ಎಂದು ಟ್ವೀಟ್ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!