ಗೋವಾದಲ್ಲಿ ಇಸ್ರೇಲಿಗನ ಜತೆ ಪ್ರೀತಿ: ಗುಹೆಯಲ್ಲಿ ವಾಸವಿದ್ದ ರಷ್ಯಾ ಮಹಿಳೆ ಕುರಿತು ಅಚ್ಚರಿ ವಿಚಾರ ಬಹಿರಂಗ!

ಹೊಸ ದಿಗಂತ ಡಿಜಿಟಿಲ್ ಡೆಸ್ಕ್:

ಗೋಕರ್ಣದ ರಾಮತೀರ್ಥ ದಟ್ಟಾರಣ್ಯದ ಗುಹೆಯಲ್ಲಿ ವಾಸವಿದ್ದ ರಷ್ಯಾ ಮಹಿಳೆ ಕುರಿತು ದಿನಕ್ಕೊಂದು ಅಚ್ಚರಿ ವಿಚಾರಗಳು ಬಯಲಾಗುತ್ತಿದೆ. ಇದೀಗ ಆಕೆಯ ಪ್ರಿಯಕರ ತನ್ನ ಮಕ್ಕಳನ್ನು ಹುಡುಕಿಕೊಂಡು ಬಂದಿದ್ದಾರೆ.

ಮಹಿಳೆ ನೀನಾ ಕುಟಿನಾ ರಷ್ಯಾ ಪ್ರಜೆಯಾಗಿದ್ದು, ಈಕೆ ಇಸ್ರೇಲ್‌ ಪ್ರಜೆ ಡ್ರೋರ್ ಗೋಲ್ಡ್‌ಸ್ಟೆನ್‌ ಎಂಬಾತನ ಜತೆ ಲಿವ್‌ ಇನ್‌ ರಿಲೇಷನ್‌ಶಿಪ್‌ನಲ್ಲಿದ್ದರು ಎಂದು ತಿಳಿದುಬಂದಿದೆ.

ಮಾಧ್ಯಮಗಳೊಂದಿಗೆ ಪ್ರಿಯಕರ ಗೋಲ್ಡ್‌ಸ್ಟೆನ್‌ ಮಾತನಾಡಿ, ಗೋವಾಗೆ ತೆರಳಿದ್ದಾಗ ನೀನಾ ಕುಟಿನಾ ಹಾಗೂ ನನ್ನ ನಡುವೆ ಪ್ರೀತಿ ಹುಟ್ಟಿಕೊಂಡಿತ್ತು. 2017 ರಿಂದ 2024 ರವರೆಗೂ ನಾವಿಬ್ಬರು ಲಿವ್‌ ಇನ್ ರಿಲೇಷನ್‌ಶಿಪ್‌ನಲ್ಲಿದ್ದೆವು. ವರ್ಷದಲ್ಲಿ ಆರು ತಿಂಗಳು ಗೋವಾದಲ್ಲಿ ಇರುತ್ತಿದ್ದೆವು. ಇಬ್ಬರೂ ಮಕ್ಕಳೊಂದಿಗೆ ದೊಡ್ಡದಾದ ವಿಲ್ಲಾದಲ್ಲಿ ವಾಸವಾಗಿದ್ದೆವು. 2019ರಿಂದಲೂ ನಾನು ಆಕೆಗೆ ಪ್ರತಿ ತಿಂಗಳು 400 ಡಾಲರ್ (3.5 ಲಕ್ಷ) ಹಣವನ್ನು ಕೊಡುತ್ತಿದ್ದೆ. ಆದರೆ 2024ರ ಡಿಸೆಂಬರ್‌ನಲ್ಲಿ ನೀನಾ ಯಾವುದೇ ಮಾಹಿತಿ ನೀಡದೇ ಗೋವಾದಿಂದ ಹೊರಟು ಹೋಗಿದ್ದಳು. ಬಳಿಕ ನಾನು ಪಣಜಿಯಲ್ಲಿ ಮಿಸ್ಸಿಂಗ್ ಕಂಪ್ಲೇಟ್ ಕೊಟ್ಟಿದೆ. ಬಳಿಕ ಮಾರ್ಚ್ ತಿಂಗಳಲ್ಲಿ ಆಕೆ ಮಕ್ಕಳ ಜೊತೆಗೆ ಗೋಕರ್ಣದಲ್ಲಿ ಇರುವುದು ಗೊತ್ತಾಗಿದೆ ಎಂದು ತಿಳಿಸಿದರು.

ನನ್ನ ಮಕ್ಕಳನ್ನು ನನಗೆ ಕೊಡಿ, ಸುರಕ್ಷಿತವಾದ ಜಾಗದಲ್ಲಿ ನನ್ನ ಮಕ್ಕಳು ಬೆಳೆಯಬೇಕು. ಆರು ವರ್ಷವಾದರೂ ಶಿಕ್ಷಣ ಕೊಡಿಸಿಲ್ಲ. ಶಾಲೆಗೆ ಕಳುಹಿಸಬೇಕು ಎಂದಿದ್ದಾರೆ. ಆದರೆ ಮಹಿಳೆ ಪ್ರಿಯಕರನ ಜತೆ ಮಕ್ಕಳನ್ನು ಕಳಿಸಲು ನಿರಾಕರಿಸುತ್ತಿದ್ದು, ಮಕ್ಕಳು ಪರಿಸರದಲ್ಲೇ ಬೆಳೆಯಬೇಕು ಎಂದು ವಾದ ಮಾಡುತ್ತಿದ್ದಾರೆ.

ಮೂಲಗಳ ಪ್ರಕಾರ, ನೀನಾ ಗುಹೆಯಲ್ಲಿದ್ದಾಗ ಒಂದು ಮಗುವಿಗೆ ಜನ್ಮ ನೀಡಿದ್ದು, ಈ ಎರಡು ಮಕ್ಕಳ ಹೊರತಾಗಿ ರಷ್ಯಾದಲ್ಲಿ ಇನ್ನೊಂದು ಮಗುವಿದೆ ಎಂದು ತಿಳಿದು ಬಂದಿದೆ.

ಇತ್ತೀಚಿಗೆ ಮಾತನಾಡಿದ್ದ ಮಹಿಳೆ ನೀನಾ, ನನ್ನ ದೊಡ್ಡ ಮಗ ಸಾವನ್ನಪ್ಪಿದ್ದ. ಹೀಗಾಗಿ ವೀಸಾ ಪಡೆಯಲು ಸಾಧ್ಯವಾಗಿರಲಿಲ್ಲ. ಭಾರತದ ವೀಸಾ ಅವಧಿ ಮುಗಿದಿತ್ತು. ಅದಕ್ಕಾಗಿ ನಾನು 20 ದೇಶದಲ್ಲಿ ಇದೇ ರೀತಿ ಕಾಡಿನಲ್ಲಿ ವಾಸವಿದ್ದೆ. ಪ್ರಕೃತಿಯ ಜತೆಗಿದ್ದು ಅಪಾರವಾದ ಅನುಭವ ಸಿಗುತ್ತದೆ. ಬದುಕಿನಲ್ಲಿ ಚಂದದ ಅನುಭವ ಸಿಗಬೇಕು ಎನ್ನುವ ಕಾರಣಕ್ಕೆ ಗುಹೆಯಲ್ಲಿ ಪ್ರಕೃತಿಯ ಮಧ್ಯೆ ವಾಸವಾಗಿದ್ದೆ ಎಂದಿದ್ದರು.

ಜು.12ರಂದು ಗೋಕರ್ಣದ ರಾಮತೀರ್ಥ ದಟ್ಟಾರಣ್ಯದಲ್ಲಿನ ಗುಹೆಯಲ್ಲಿ ಏಕಾಂತವಾಗಿ ವಾಸಿಸುತ್ತಿದ್ದ ರಷ್ಯಾ ಮೂಲದ ಮಹಿಳೆ ಹಾಗೂ ಎರಡು ಪುಟ್ಟ ಮಕ್ಕಳನ್ನು ರಕ್ಷಣೆ ಮಾಡಲಾಗಿತ್ತು. ಸದ್ಯ ಆಕೆಯನ್ನು ತುಮಕೂರಿನಲ್ಲಿರುವ ಎಫ್‌ಆರ್‌ಸಿ ಕೇಂದ್ರಕ್ಕೆ ಕರೆತರಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!