September 22, 2026
Tuesday, September 22, 2026
spot_img

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಆಂಧ್ರ–ಒಡಿಶಾ ಕರಾವಳಿಗೆ ಭಾರೀ ಮಳೆ ಎಚ್ಚರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಂಗಾಳ ಕೊಲ್ಲಿಯಲ್ಲಿ ರೂಪುಗೊಂಡಿರುವ ವಾಯುಭಾರ ಕುಸಿತ ಮತ್ತಷ್ಟು ತೀವ್ರಗೊಂಡಿದ್ದು, ಮುಂದಿನ 12 ಗಂಟೆಗಳಲ್ಲಿ ಆಳವಾದ ವಾಯುಭಾರ ಕುಸಿತವಾಗಿ ಪರಿವರ್ತನೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ವಾಯುಭಾರ ಕುಸಿತದ ಪರಿಣಾಮ ಒಡಿಶಾ ಹಾಗೂ ಪಶ್ಚಿಮ ಬಂಗಾಳದ ಹಲವು ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಕರಾವಳಿ ಪ್ರದೇಶಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ.

ಹವಾಮಾನ ಮುನ್ಸೂಚನೆ ಹಿನ್ನೆಲೆಯಲ್ಲಿ ಒಡಿಶಾದ ಹಲವು ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಖುರ್ದಾ, ಜಗತ್ಸಿಂಗ್‌ಪುರ, ಗಂಜಾಂ ಹಾಗೂ ಗಜಪತಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಮಲ್ಕಾನಗಿರಿ ಜಿಲ್ಲೆಯಲ್ಲಿ ಸೆ.24ರವರೆಗೆ ಶಾಲೆಗಳನ್ನು ಮುಚ್ಚುವಂತೆ ಸೂಚಿಸಲಾಗಿದೆ. ತುರ್ತು ಪರಿಸ್ಥಿತಿ ಎದುರಾದರೆ ಶಾಲಾ ಕಟ್ಟಡಗಳನ್ನು ಬಳಸಿಕೊಳ್ಳಲು ಅಗತ್ಯ ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ಓದಿ:

ಇದೇ ವೇಳೆ ಆಂಧ್ರಪ್ರದೇಶದ ಕರಾವಳಿ ಪ್ರದೇಶಗಳಲ್ಲೂ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಮೀನುಗಾರರು ಸಮುದ್ರಕ್ಕೆ ತೆರಳದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಬಂದರು ಪ್ರದೇಶಗಳಲ್ಲೂ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಚಲನವಲನದ ಮೇಲೆ ಹವಾಮಾನ ಇಲಾಖೆ ನಿರಂತರ ನಿಗಾ ಇರಿಸಿದ್ದು, ಕರಾವಳಿ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ. ಭಾರಿ ಮಳೆಯ ಸಾಧ್ಯತೆ ಇರುವ ಪ್ರದೇಶಗಳ ಜನರು ಸ್ಥಳೀಯ ಆಡಳಿತದ ಸೂಚನೆಗಳನ್ನು ಪಾಲಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !