ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಂಗಾಳಕೊಲ್ಲಿಯಲ್ಲಿ ವಾಯಭಾರ ಕುಸಿತ ಹಿನ್ನೆಲೆ ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಜೂನ್ 15ರವರೆಗೆ ಬೆಂಗಳೂರು ಸೇರಿ ರಾಜ್ಯದ ಎಲ್ಲಾ ಭಾಗದಲ್ಲೂ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಹಿನ್ನೆಲೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರು ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.