ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಂಗಾಳ ಕೊಲ್ಲಿಯ ನೈರುತ್ಯ ಭಾಗದಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ ಸಿಲಿಕಾನ್ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ತುಂತುರು ಮಳೆ ಶುರುವಾಗಿದೆ. ನಗರದಲ್ಲಿ ಮುಂದಿನ ಎರಡು ದಿನಗಳ ಕಾಲ ಮೋಡ ಕವಿದ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು ಮತ್ತು ನಾಳೆ ಮಳೆಯ ಮುನ್ಸೂಚನೆ ನೀಡಿದ್ದು, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಿಗೆ ಇಂದು (ನ.13) ಯೆಲ್ಲೋ ಅಲರ್ಟ್ ಘೋಷಿಸಿದೆ ಹಾಗೂ ಶಿವಮೊಗ್ಗ, ಚಾಮರಾಜನಗರ ಜಿಲ್ಲೆಗಳಿಗೆ ನಾಳೆ ಯೆಲ್ಲೋ (ನ.14) ಅಲರ್ಟ್ ಘೋಷಿಸಿದೆ.
ಇನ್ನೂ ದಕ್ಷಿಣ ಒಳನಾಡು, ಕರಾವಳಿಯ ಕೆಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ತುಂತುರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.