ದ್ವಿತೀಯ ಪಿಯುಸಿಯಲ್ಲಿ ಕಡಿಮೆ ಅಂಕ: ವಿದ್ಯಾರ್ಥಿನಿ ನೇಣಿಗೆ ಶರಣು

ಹೊಸದಿಗಂತ ವರದಿ, ಶ್ರೀರಂಗಪಟ್ಟಣ :

ದ್ವಿತೀಯ ಪಿಯುಸಿಯಲ್ಲಿ ಕಡಿಮೆ ಅಂಕ ಬಂದ ಕಾರಣ ಮನನೊಂದು ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಮಹದೇವಪುರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಜಗದೀಶ್ ಮತ್ತು ಸಾವಿತ್ರಿ ದಂಪತಿ ಪುತ್ರಿ ಸ್ಪಂದನಾ (18) ಎಂಬಾಕೆಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.
ಈಕೆ ಮಂಡ್ಯದ ಸ್ಯಾಂತೋಮ್ ಪದವಿಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಪಿಸಿಎಂಬಿ ವಿಷಯ ತೆಗೆದುಕೊಂಡಿದ್ದ ಸ್ಪಂದನಾ ಪರೀಕ್ಷೆಯಲ್ಲಿ ಉತ್ತಮ ಅಂಕ ಬರುವುದೆಂದು ನಿರೀಕ್ಷೆ ಮಾಡಿದ್ದಳು. ಆದರೆ ಕಡಿಮೆ ಅಂಕ ಬಂದ ಕಾರಣ ಮನನೊಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಮನೆಯಲ್ಲಿ ಯಾರೂ ಇಲ್ಲದ ವೇಳೆ ಸ್ಪಂದನಾ ಮನೆಯ ತೊಲೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಸ್ಪಂದನಾ ದುಡುಕಿನ ನಿರ್ಧಾರ ಕೈಗೊಂಡಿದ್ದಾಳೆ ಎಂದು ತಾಲೂಕು ಪಂಚಾಯಿತಿ ಸದಸ್ಯ ಕಾಳೇಗೌಡ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!