Friday, December 8, 2023

Latest Posts

ಎಲ್‌ಪಿಜಿ ಸಿಲಿಂಡರ್‌ ಬೆಲೆ 57 ರೂ. ಇಳಿಕೆ: ಹೊಸ ದರ ಹೀಗಿದೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು (ಒಎಂಸಿ), ವ್ಯಾಪಾರಿಗಳು ಹಾಗೂ ಗ್ರಾಹಕರಿಗೆ ಸಿಹಿ ಸುದ್ದಿ ನೀಡಿದೆ. ಅದೇನೆಂದರೆ ನಾಲ್ಕು ಮಹಾನಗರಿಗಳಲ್ಲಿ 19 ಕಿಲೋ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬೆಲೆಯನ್ನ 57.50 ರೂಗಳಷ್ಟು ಇಳಿಕೆ ಮಾಡಲಾಗಿದೆ.

ನವದೆಹಲಿ, ಮುಂಬೈ, ಕೋಲ್ಕತಾ ಮತ್ತು ಚೆನ್ನೈ ಮಹಾನಗರಿಗಳಲ್ಲಿ ಬೆಲೆ ಇಳಿಕೆಯಾಗಿದ್ದು, ನವೆಂಬರ್ 16 ಅಂದರೆ ನಿನ್ನೆ ಗುರುವಾರದಿಂದಲೇ ಹೊಸ ದರ ಜಾರಿಗೆ ಬಂದಿದೆ.

ಪರಿಷ್ಕೃತ ಬೆಲೆಗಳ ಪ್ರಕಾರ, 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ನವದೆಹಲಿಯಲ್ಲಿ 1,775.5 ರೂ., ಕೋಲ್ಕತ್ತಾದಲ್ಲಿ 1,885.5 ರೂ., ಮುಂಬೈನಲ್ಲಿ 1,728 ರೂ., ಚೆನ್ನೈನಲ್ಲಿ 1,942 ರೂ. ಇದೆ.

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ ಮಾತ್ರ ಇಳಿಕೆಯಾಗಿದ್ದು, ಗೃಹಬಳಕೆಯ ಎಲ್​ಪಿಜಿ ಸಿಲಿಂಡರ್​ಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!