ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಂಡಿರುವ ಇರಾನ್–ಇಸ್ರೇಲ್ ಸಂಘರ್ಷದ ನಡುವೆಯೇ ಭಾರತದಲ್ಲಿ ವಾಣಿಜ್ಯ ಬಳಕೆಯ 19 ಕೆಜಿ ಎಲ್‌ಪಿಜಿ ಸಿಲಿಂಡರ್ ದರದಲ್ಲಿ ಇಳಿಕೆ ಕಂಡುಬಂದಿದೆ. ತೈಲ ಮಾರುಕಟ್ಟೆ ಸಂಸ್ಥೆಗಳು ದರ ಕಡಿತಗೊಳಿಸಿದ್ದು, ಇಂದಿನಿಂದಲೇ ಹೊಸ ದರಗಳು ಜಾರಿಗೆ ಬಂದಿವೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 19 ಕೆಜಿ ಸಿಲಿಂಡರ್ ದರ 28 ರೂಪಾಯಿ ಇಳಿಕೆಯಾಗಿದ್ದು, 1768.5 ರೂಪಾಯಿಗಳಿಂದ 1740.5 ರೂಪಾಯಿಗೆ ಕುಸಿದಿದೆ. ಕೋಲ್ಕತ್ತಾದಲ್ಲಿ 31 ರೂಪಾಯಿ ಇಳಿಕೆಯಿಂದ 1844.5 ರೂಪಾಯಿಗೆ ಲಭ್ಯವಾಗಲಿದೆ. ಮುಂಬೈ ಹಾಗೂ ಚೆನ್ನೈ ನಗರಗಳಲ್ಲೂ ಕ್ರಮವಾಗಿ 28.5 ಮತ್ತು 29.5 ರೂಪಾಯಿ ದರ ಕಡಿಮೆಯಾಗಿದೆ.
ಇದನ್ನೂ ಓದಿ:
ಬೆಂಗಳೂರು ನಗರದಲ್ಲೂ ವಾಣಿಜ್ಯ ಸಿಲಿಂಡರ್ ಬೆಲೆ 1841 ರೂಪಾಯಿಗೆ ಇಳಿಕೆಯಾಗಿದ್ದು, ಗೃಹ ಬಳಕೆಯ 14.2 ಕೆಜಿ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಇಲ್ಲ, ಅದು 855 ರೂಪಾಯಿಯಲ್ಲೇ ಮುಂದುವರಿದಿದೆ.
ಎಲ್‌ಪಿಜಿ ದರಗಳನ್ನು ಇಂಡಿಯನ್ ಆಯಿಲ್ ಕಾರ್ಪೊರೇಷನ್, ಎಚ್‌ಪಿಸಿಎಲ್ ಮತ್ತು ಬಿಪಿಸಿಎಲ್‌ನಂತಹ ಭಾರತೀಯ ತೈಲ ಮಾರುಕಟ್ಟೆ ಕಂಪನಿಗಳು (ಒಎಂಸಿ) ಸೇರಿದಂತೆ ತೈಲ ಮಾರುಕಟ್ಟೆ ಸಂಸ್ಥೆಗಳು ನಿರ್ಧರಿಸುತ್ತವೆ. ನಗರಾವಾರಿ ತೆರಿಗೆ ಹಾಗೂ ಸಾರಿಗೆ ವೆಚ್ಚದ ಆಧಾರದ ಮೇಲೆ ದರಗಳಲ್ಲಿ ವ್ಯತ್ಯಾಸ ಕಾಣಿಸಬಹುದು.



